
ಹೊಸದಿಲ್ಲಿ: ಜಾರ್ಖಂಡ್ ವಿಧಾನಸಭೆಯ 81 ಸ್ಥಾನಗಳಿಗೆ ನಡೆದ ಚುನಾವಣೆಯ ಮತಗಳ ಎಣಿಕೆ ಪ್ರಗತಿಯಲ್ಲಿದ್ದು, ಬಿಜೆಪಿ 27 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಜೆಎಂಎಂ- ಕಾಂಗ್ರೆಸ್ ಮತ್ತು ಆರ್ಜೆಡಿ ಮೈತ್ರಿಕೂಟ ಒಟ್ಟಾಗಿ 43 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ. ಬಹುಮತಕ್ಕೆ 41 ಸ್ಥಾನಗಳ ಅಗತ್ಯವಿದ್ದು, ಜೆಎಂಎಂ ಮೈತ್ರಿಕೂಟ ಅಧಿಕಾರಕ್ಕೆ ಬರುವ ಎಲ್ಲ ಲಕ್ಷಣಗಳಿವೆ.
ಹಾಗಿದ್ದರೂ ಬಿಜೆಪಿ ನಾಯಕತ್ವದಲ್ಲಿ ಹೊಸ ಸರಕಾರ ರಚನೆಯಾಗಲಿದೆ ಎಂದು ಜಾರ್ಖಂಡ್ ಮುಖ್ಯಮಂತ್ರಿ ರಘುಬರ್ ದಾಸ್ ಹೇಳಿಕೊಂಡಿದ್ದಾರೆ.
ರಾಜ್ಯದ ದಕ್ಷಿಣ ಮತ್ತು ಪೂರ್ವ ಭಾಗಗಳಲ್ಲಿ ಕಾಂಗ್ರೆಸ್-ಜೆಎಂಎಂ ಮೈತ್ರಿಕೂಟ ಉತ್ತಮ ಸಾಧನೆ ಮಾಡಿವೆ. ಪಶ್ಚಿಮ ಮತ್ತು ಮಧ್ಯಭಾಗದಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಿದೆ.
ಎಜೆಎಸ್ಯುಪಿ ಮತ್ತು ಜೆವಿಎಂ(ಪಿ) ಕಿಂಗ್ ಮೇಕರ್ಗಳಾಗಿ ಹೊರಹೊಮ್ಮುವ ಸಾಧ್ಯತೆಯಿದೆ. ಜೆವಿಎಂ(ಪಿ) 4 ಹಾಗೂ ಎಜೆಎಸ್ಯುಪಿ 1 ಸ್ಥಾನದಲ್ಲಿ ಮುನ್ನಡೆ ಸಾಧಿಸಿವೆ. ಇತರರು 6 ಸೀಟುಗಳಲ್ಲಿ ಮುಂದಿದ್ದಾರೆ.
ಮತಗಳ ಎಣಿಕೆ ಆರಂಭವಾದ ಹೊತ್ತಿಗೆ ಕಾಂಗ್ರೆಸ್-ಜೆಎಂಎಂ ಕೂಟ ಮುನ್ನಡೆ ಗಳಿಸಿದರೆ, 1 ಗಂಟೆಯ ಬಳಿಕ ಬಿಜೆಪಿ ಮುನ್ನಡೆ ಸಾಧಿಸಿತು. 10 ಗಂಟೆಯ ವೇಳೆಗೆ ಬಿಜೆಪಿ 29 ಹಾಗೂ ಕಾಂಗ್ರೆಸ್-ಜೆಎಂಎಂ ಮೈತ್ರಿಕೂಟ 41 ಸೀಟುಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದವು. ಇತರರ 11 ಸ್ಥಾನಗಳಲ್ಲಿ ಮುಂದಿದ್ದರು.
ಉಪಯುಕ್ತ ನ್ಯೂಸ್)
ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಟ್ವಿಟರ್ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ
ಯೂಟ್ಯೂಬ್ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ