ರಾಜ್ಯ

ಕನ್ನಡ ಪುಸ್ತಕ ಪ್ರಾಧಿಕಾರ: ಗಣರಾಜ್ಯೋತ್ಸವದ ಪ್ರಯುಕ್ತ ಶೇ 50ರ ರಿಯಾಯಿತಿ ದರಗಳಲ್ಲಿ ಮಾರಾಟ

ಮಂಗಳೂರು: ಗಣರಾಜ್ಯೋತ್ಸವದ ಅಂಗವಾಗಿ 2020ರ ಜನವರಿ ತಿಂಗಳು ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಕಡಾ 50%ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುತ್ತದೆ. ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಕನ್ನಡ ಪುಸ್ತಕ ಪ್ರಾಧಿಕಾರದ ಆನ್‍ಲೈನ್‍ನಲ್ಲಿ ಶೇ.50% ರಿಯಾಯಿತಿ ಲಭ್ಯವಿದೆ.

ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳನ್ನು ಶೇಕಡಾ 50%ರ ರಿಯಾಯಿತಿಯಲ್ಲಿ ಅಂತರ್ಜಾಲ www.kannadapustakapradhikara.com ನಲ್ಲಿ ನಮ್ಮ ಪುಸ್ತಕಗಳು ವಿಭಾಗದಲ್ಲಿ ಆಯ್ಕೆ ಮಾಡಿ, ಆನ್‍ಲೈನ್ ಮೂಲಕ ಹಣ ಪಾವತಿಸಿ ಪುಸ್ತಕಗಳನ್ನು ಅಂಚೆ ಮೂಲಕ ಪಡೆಯಬಹುದು.

ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಸುಮಾರು 349 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಲು ಕನ್ನಡ ಪುಸ್ತಕ ಪ್ರಾಧಿಕಾರ ಆಡಳಿತಾಧಿಕಾರಿ ಪ್ರಕಟಣೆ ತಿಳಿಸಿದೆ.

(ಉಪಯುಕ್ತ ನ್ಯೂಸ್)

ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

Related posts

ಪೂರ್ಣ ಪ್ರಮಾಣದ ತರಗತಿಗಳ ಆರಂಭದ ಬಗ್ಗೆ ಶಿಕ್ಷಣ ಸಚಿವರು ಶಿವಮೊಗ್ಗದಲ್ಲಿ ಏನೆಂದರು?

Upayuktha

ಕೋವಿಡ್‌ 19 ಅಪ್‌ಡೇಟ್ಸ್‌: ಇಂದು ರಾಜ್ಯದಲ್ಲೇ ಅತ್ಯಧಿಕ ಉಡುಪಿಯಲ್ಲಿ 73, ದ.ಕ. 4 ಕೊರೊನಾ ಪ್ರಕರಣ

Upayuktha

ಡಾ. ಮುರಲೀ ಮೋಹನ ಚೂಂತಾರು ಸಹಿತ 12 ವೈದ್ಯ ಸಾಹಿತಿಗಳಿಗೆ ರಾಜೀವ್‌ ಗಾಂಧಿ ವಿವಿ ಸನ್ಮಾನ

Upayuktha