ಪ್ರಮುಖ ರಾಜ್ಯ

ಜಾರಕಿಹೊಳೆ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು

ಬೆಂಗಳೂರು: ಮಂಗಳವಾರ ಲೈಂಗಿಕ ದೌರ್ಜನ್ಯ ಸಿಡಿ ಬಹಿರಂಗಗೊಂಡ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ಸಲ್ಲಿಸಿದ್ದರು. ರಮೇಶ್​ ಜಾರಕಿಹೊಳಿ ಸಲ್ಲಿಸಿದ್ದ ರಾಜೀನಾಮೆಯನ್ನು ಸಿಎಂ ಬಿ.ಎಸ್​. ಯಡಿಯೂರಪ್ಪ ಅಂಗೀಕಾರ ಮಾಡಿ, ರಾಜ್ಯಪಾಲರಿಗೆ ರವಾನೆ ಮಾಡಿದ್ದರು. ಇದೀಗ ಅದನ್ನ ರಾಜ್ಯಪಾಲರು ಅಂಗೀಕಾರ ಮಾಡಿದ್ದಾರೆ.

ಬಾಲಚಂದ್ರ ಜಾರಕಿಹೊಳಿ ಮೂಲಕ ರಾಜೀನಾಮೆ ಪತ್ರವನ್ನು ಸಿಎಂ ಯಡಿಯೂರಪ್ಪ ಅವರಿಗೆ ಸಲ್ಲಿಕೆ ಮಾಡಿದ್ದರು. ಪಕ್ಷ ಹಾಗೂ ಸರ್ಕಾರಕ್ಕೆ ಮುಜುಗರವಾಗಬಾರದು ಎನ್ನುವ ಕಾರಣಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದರು.

ರಾಜೀನಾಮೆ ಪತ್ರವನ್ನ ತಕ್ಷಣವೇ ಅಂಗೀಕಾರ ಮಾಡುವಂತೆ ಸಿಎಂ ಯಡಿಯೂರಪ್ಪ ಅವರು ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದರು. ಇದರ ಬೆನ್ನಲ್ಲೇ ರಾಜ್ಯಪಾಲರು ಇದನ್ನ ಅಂಗೀಕಾರ ಮಾಡಿದ್ದಾರೆ. ಗುರುವಾರದಿಂದ ವಿಧಾನಮಂಡಲ ಬಜೆಟ್​​ ಅಧಿವೇಶನ ಆರಂಭವಾಗುತ್ತಿದ್ದು, ಸರ್ಕಾರವನ್ನು ಮುಜುಗರದಿಂದ ತಪ್ಪಿಸಲು ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

Related posts

ಚಿಕ್ಕಮಗಳೂರು: ಕಾರುಗಳ ಮುಖಾಮುಖಿ ಡಿಕ್ಕಿ ; ಮೂವರು ಸಾವು

Harshitha Harish

ನಾರಾವಿ: ಕಂದಾಯ ಇಲಾಖೆಯ ಗ್ರಾಮ ವಾಸ್ತವ್ಯ ಕಾರ್ಯಕ್ರಮ

Sushmitha Jain

ನೈಋತ್ಯ ಮುಂಗಾರು ಜೂನ್ 1ಕ್ಕೆ ಕೇರಳ ಪ್ರವೇಶ ನಿರೀಕ್ಷೆ

Upayuktha