ರಾಜ್ಯ

ಪತ್ರಕರ್ತರು ಇನ್ನು ಕೋವಿಡ್ ಫ್ರಂಟ್ ಲೈನ್ ವರ್ಕರ್ಸ್: ಮುಖ್ಯಮಂತ್ರಿ ಘೋಷಣೆ

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ) ಮನವಿಯನ್ನು ಪುರಸ್ಕರಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪತ್ರಕರ್ತರನ್ನು ಕೋವಿಡ್ ಫ್ರಂಟ್ ಲೈನ್ ವರ್ಕರ್ಸ್ ಎಂದು ಘೋಷಣೆ ಮಾಡಿದ್ದಾರೆ.

ಕೆಯುಡಬ್ಲ್ಯೂಜೆ ಅಧ್ಯಕ್ಷರಾದ ಶಿವಾನಂದ ತಗಡೂರು ನೇತೃತ್ವದಲ್ಲಿ ಇಂದು ಮುಖ್ಯಮಂತ್ರಿ ಭೇಟಿ ಮಾಡಿದ ನಿಯೋಗಕ್ಕೆ ಭರವಸೆ ನೀಡಿದ್ದಲ್ಲದೆ, ಈ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದಾರೆ. ನಿಯೋಗದಲ್ಲಿ ಪಬ್ಲಿಕ್ ಟಿವಿ ರವೀಶ್, ಪತ್ರಕರ್ತರಾದ ಯುಎನ್ ಐ ರಾಚಪ್ಪ, ಪ್ರಜಾ ಟಿವಿಯ ಅರುಣ್ ಕುಮಾರ್ ಮತ್ತಿತರರು ಹಾಜರಿದ್ದರು.

ಅಭಿನಂದನೆ:
ಕೆಯುಡಬ್ಲ್ಯೂಜೆ ಮನವಿ ಪರಿಗಣಿಸಿ ಈ ಕ್ರಮ ಕೈಗೊಂಡ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಅಭಿನಂದಿಸಿದ್ದಾರೆ.

 

 

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

Related posts

ಕರಾವಳಿ ಭಾಗದಲ್ಲಿ ಹಲವೆಡೆ ಉತ್ತಮ ಮಳೆ

Harshitha Harish

ನಗರದಲ್ಲಿರುವ ಕೆಮಿಕಲ್ ಗೋದಾಮುಗಳನ್ನು ತೆರವುಗೊಳಿಸಲು ಕಮಲ್ ಪಂತ್ ಆದೇಶ

Harshitha Harish

ರಸ್ತೆ ಮೇಲೆ ಹೊಸ ವರ್ಷದ ಶುಭಾಶಯ ಬರೆಯುವ ವೇಳೆ ಕಾರು ಡಿಕ್ಕಿ; ಇಬ್ಬರು ಸಾವು

Harshitha Harish