ಪ್ರಮುಖ ರಾಜ್ಯ

ಜೀವ-ಜೀವನ ಸರಿದೂಗಿಸುವ ಯತ್ನ: ಮಾಸ್ಕ್‌ ಬಳಸದವರಿಗೆ ದಂಡದ ಪ್ರಮಾಣ ಇಳಿಕೆ, ತಕ್ಷಣದಿಂದ ಜಾರಿಗೆ

(ಚಿತ್ರ ಕೃಪೆ: ದಿ ವೀಕ್)

ಬೆಂಗಳೂರು: ಕೊರೊನಾ ಸಾಂಕ್ರಾಮಿಕ ತಡೆಯುವ ನಿಟ್ಟಿನಲ್ಲಿ ಮಾಸ್ಕ್‌ ಧರಿಸದಿದ್ದರೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಧರಿಸದವರಿಗೆ ವಿಧಿಸಲಾಗುವ ದಂಡದ ಮೊತ್ತವನ್ನು ನಗರ ಪ್ರದೇಶದಲ್ಲಿ ರೂ 250 ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ರೂ 100ಕ್ಕೆ ಇಳಿಸಲಾಗಿದೆ.

ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಪ್ರಕಟಣೆ ನೀಡಿದ್ದಾರೆ. ಸಾರ್ವಜನಿಕರ ವಿರೋಧ ಮತ್ತು ತಜ್ಞರ ಅಭಿಪ್ರಾಯದ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಂಡಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಕೋವಿಡ್ 19 ಸೋಂಕು ಕರ್ನಾಟಕದಲ್ಲಿ ಕಾಣಿಸಿಕೊಂಡ ದಿನದಿಂದ ಸೋಂಕನ್ನು ತಡೆಯಲು ಸರಕಾರ ಎಲ್ಲ ಪ್ರಯತ್ನಗಳನ್ನೂ ಮಾಡುತ್ತಿದ್ದು, ಲಾಕ್‌ಡೌನ್‌ ವಿಧಿಸುವುದಲ್ಲದೆ, ಮಾಸ್ಕ್‌, ಸ್ಯಾನಿಟೈಸರ್ ಬಳಕೆ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ.

ಕೋವಿಡ್ 19 ಸೋಂಕನ್ನು ತಡೆಯಲು ಇದುವರೆಗೂ ಯಾವುದೇ ಲಸಿಕೆ ಇಲ್ಲದ ಕಾರಣ ಪ್ರಸ್ತುತ ಮಾಸ್ಕ್‌ ಹಾಗೂ ಸ್ಯಾನಿಟೈಸರ್ ಬಳಕೆಯ ಜತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅನಿವಾರ್ಯವಾಗಿದೆ.

ಇತ್ತೀಚಿನ ಆದೇಶದಲ್ಲಿ ಸರಕಾರವು ನಗರಪ್ರದೇಶದಲ್ಲಿ ಮಾಸ್ಕ್‌ ಬಳಸದಿದ್ದರೆ 1,000 ರೂ ದಂಡ ಹಾಗೂ ಗ್ರಾಮೀಣ ಪ್ರದೇಶದಲ್ಲಿ 500 ರೂ ದಂಡ ವಿಧಿಸಲು ಕ್ರಮ ತೆಗೆದುಕೊಳ್ಳಲಾಗಿದೆ. ಆದರೆ ಸಾರ್ವಜನಿಕರ ವಿರೋಧದ ಕಾರಣದಿಂದ ಈ ದಂಡದ ಮೊತ್ತಗಳನ್ನು ಕ್ರಮವಾಗಿ 250 ಹಾಗೂ 100 ರೂ.ಗಳಿಗೆ ಇಳಿಸಲು ತೀರ್ಮಾನಿಸಲಾಗಿದೆ. ಇದು ತಕ್ಷಣದಿಂದಲೇ ಜಾರಿಗೆ ಬರುತ್ತದೆ ಎಂದು ಮುಖ್ಯಮಂತ್ರಿಗಳ ಪ್ರಕಟಣೆ ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿರುವಂತೆ ‘ಜೀವ ಮತ್ತು ಜೀವನ’ ಎರಡನ್ನೂ ಸರಿದೂಗಿಸಿಕೊಂಡು ಹೋಗಲು ಸರಕಾರ ಸರ್ವ ಪ್ರಯತ್ನಗಳನ್ನೂ ಮಾಡುತ್ತಿದೆ. ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಮಾಸ್ಕ್, ಸ್ಯಾನಿಟೈಸರ್ ಬಳಕೆ ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಮೂಲಕ ಸಹಕರಿಸಬೇಕು ಎಂದು ಮುಖ್ಯಮಂತ್ರಿ ಕೋರಿದ್ದಾರೆ.

ರಾಜ್ಯದಲ್ಲಿ ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಂಡದ ಮೊತ್ತವನ್ನು ಹೆಚ್ಚಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಹೇಳಿದ್ದರು.

ಹಾಗೆಯೇ ದಂಡದ ಮೊತ್ತವನ್ನು ಹೆಚ್ಚಿಸಲು ಸರ್ಕಾರಕ್ಕೆ ಸಲಹೆ ಸೂಚನೆ ಕೊಟ್ಟು ಹೆಚ್ಚಳ ಮಾಡಿದರು. ಇದೀಗ ಸಾರ್ವಜನಿಕರ ತೀವ್ರ ವಿರೋಧ ದಿಂದ ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಧ್ಯ ಪ್ರವೇಶ ಮಾಡಿ ದಂಡದ ದರವನ್ನು ಕಡಿಮೆ ಮಾಡಿದ್ದಾರೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

Related posts

ನಾನು ‘ರಾಹುಲ್ ಸಾವರ್ಕರ್’ ಅಲ್ಲ, ನಾನು ಕ್ಷಮೆ ಕೇಳಲ್ಲ:  ರಾಹುಲ್ ಗಾಂಧಿ

Upayuktha

ಕಾಸರಗೋಡು: ಎಡನೀರು ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ದೇಹಾಂತ್ಯ

Upayuktha

ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಅವಸರದಲ್ಲಿ ಪರೀಕ್ಷೆ ಮಾಡಲ್ಲ, ಸುಳ್ಳು ಸುದ್ದಿ ನಂಬದಿರಿ: ಸಚಿವ ಸುರೇಶ್ ಕುಮಾರ್

Upayuktha

Leave a Comment