ಸ್ಥಳೀಯ

ಮಂಗಳೂರು ಮಹಾನಗರ ಪಾಲಿಕೆ ಸೇರಿ 14 ಸ್ಥಳೀಯಾಡಳಿತ ಸಂಸ್ಥೆಗಳಿಗೆ ನ. 12ಕ್ಕೆ ಚುನಾವಣೆ

ಮಂಗಳೂರು ಮಹಾನಗರಪಾಲಿಕೆ (ಚಿತ್ರ: ಪಾಲಿಕೆಯ ಅಧಿಕೃತ ಜಾಲತಾಣದಿಂದ)

ಮಂಗಳೂರು:

ಮಂಗಳೂರು ಮಹಾನಗರ ಪಾಲಿಕೆಯ ಒಟ್ಟು 60 ವಾರ್ಡ್‌ಗಳೂ ಸೇರಿದಂತೆ ರಾಜ್ಯದ ಒಟ್ಟು 14 ನಗರ ಸ್ಥಳೀಯ ಸಂಸ್ಥೆಗಳಿಗೆ ಒಟ್ಟು 14 ನಗರ ಸ್ಥಳೀಯ ಸಂಸ್ಥೆಗಳಿಗೆ ನವೆಂಬರ್ 12ರಂದು ಚುನಾವಣೆ ನಡೆಯಲಿದ್ದು ನವಂಬರ್ 14ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಳ್ಳಲಿದೆ.

ಡಿಸೆಂಬರ್ ತಿಂಗಳಲ್ಲಿ ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸಲಿರುವ ಶಿವಮೊಗ್ಗ ಜಿಲ್ಲೆಯ ಜೋಗ್-ಕಾರ್ಗಲ್ ಪಟ್ಟಣ ಪಂಚಾಯತಿ ಮತ್ತು ಬಳ್ಳಾರಿಯ ಕಂಪ್ಲಿ ಪುರಸಭೆ ಹಾಗೂ ಕೂಡ್ಲಿಗಿ ಪಟ್ಟಣ ಪಂಚಾಯತಿಯು ಸೇರಿದೆ. 2 ಮಹಾನಗರ ಪಾಲಿಕೆಗಳು, 6 ನಗರಸಭೆಗಳು, 3 ಪುರಸಭೆಗಳು ಹಾಗೂ 3 ಪಟ್ಟಣ ಪಂಚಾಯತಿಗಳಿಗೂ ಚುನಾವಣೆ ನಡೆಯುತ್ತಿದೆ.

ಇವುಗಳ ಜೊತೆಯಲ್ಲಿ 5 ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಸಹ ನಡೆಯಲಿದೆ. ಚುನಾವಣೆ ಘೋಷಣೆ ಆಗಿರುವ ಆಯಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದ್ದು ಇದು ನವಂಬರ್ 14ರವರೆಗೆ ಜಾರಿಯಲ್ಲಿರುತ್ತದೆ.

ಅಕ್ಟೋಬರ್ 24ರಂದು ಆಯಾ ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದಾರೆ. ನಾಮಪತ್ರಗಳನ್ನು ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿರುತ್ತದೆ. ನವೆಂಬರ್ 02ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂತೆಗೆದುಕೊಳ್ಳಲು ನ.4 ಕೊನೆಯ ದಿನವಾಗಿರುತ್ತದೆ. ನ. 12ರಂದು ಅಗತ್ಯವಿರುವ ಕಡೆಗಳಲ್ಲಿ ಮತದಾನ ನಡೆಯಲಿದೆ. ಮರು ಮತದಾನ ಅಗತ್ಯವಿರುವ ಕಡೆಗಳಲ್ಲಿ ನ.13ರಂದು ಮತದಾನ ನಡೆಯಲಿದೆ. ನವೆಂಬರ್ 14ರ ಗುರುವಾರದಂದು ಆಯಾ ತಾಲೂಕುಗಳ ಕೇಂದ್ರ ಸ್ಥಳದಲ್ಲಿ ಮತಗಳ ಎಣಿಕೆ ನಡೆಯಲಿದ್ದು ಅದೇ ದಿನ ಫಲಿತಾಂಶವೂ ಪ್ರಕಟಗೊಳ್ಳಲಿದೆ.

Related posts

ಲಾಕ್‍ಡೌನ್ ವೇಳೆ ಎಸ್‌ಡಿಎಂ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ಜಾಗೃತಿ ಕಾರ್ಯ

Upayuktha

ಸಂವಿಧಾನ ನಮ್ಮ ರಾಷ್ಟ್ರದ ತಳಪಾಯ: ಮಹೇಶ್ ಕಜೆ

Upayuktha

ಕಾವೂರಿನಲ್ಲಿ ಎಸ್‌ಪಿಬಿ ಗಾನ- ನಮನ ಇಂದು ಸಂಜೆ 6ಕ್ಕೆ

Upayuktha