ಪ್ರಮುಖ ರಾಜ್ಯ ಶಿಕ್ಷಣ

ಎಸ್​​ಎಸ್​​ಎಲ್​​ಸಿ ಫಲಿತಾಂಶ ದಿನಾಂಕ ಇನ್ನೂ ನಿಗದಿಯಾಗಿಲ್ಲ: ಸಚಿವ ಸುರೇಶ್​ ಕುಮಾರ್​

ಬೆಂಗಳೂರು: ನಾಳೆ ಎಸ್​​ಎಸ್​ಎಲ್​​ಸಿ ಫಲಿತಾಂಶ ಪ್ರಕಟವಾಗಲಿದೆ ಎನ್ನುವ ಸುಳ್ಳು ಸುದ್ದಿಯೊಂದು ಹರಿದಾಡುತ್ತಿದ್ದು ಇದಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್​. ಸುರೇಶ್​​ ಕುಮಾರ್​​ ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ತಮ್ಮ ಫೇಸ್​​ಬುಕ್​​ ಖಾತೆ ಮೂಲಕ ಸ್ಪಷ್ಟನೆ ನೀಡಿರುವ ಸುರೇಶ್​ ಕುಮಾರ್​​, ಆಗಸ್ಟ್ 7ನೇ ತಾರೀಕು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ ಆಗುವುದಿಲ್ಲ. ಇನ್ನೂ ಎಸ್​ಎಸ್​ಎಲ್​​ಸಿ ಫಲಿತಾಂಶಕ್ಕೆ ದಿನಾಂಕ ನಿಗದಿಯಾಗಿಲ್ಲ ಎಂದರು.

 

ಈ ವರ್ಷ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳ ಫಲಿತಾಂಶವನ್ನು ಆಗಸ್ಟ್ ಮೊದಲನೇ ವಾರ ಪ್ರಕಟಿಸಲಾಗುವುದು ಹಾಗೂ ಪಿ.ಯು.ಸಿ ಫಲಿತಾಂಶವನ್ನು ಜುಲೈ ಕೊನೆ ವಾರದಲ್ಲಿ ಫಲಿತಾಂಶವನ್ನು ಬಿಡುಗಡೆ ಮಾಡಲಾಗುವುದು ಎಂದು ಕಳೆದ ತಿಂಗಳು ಸುರೇಶ್​​ ತಿಳಿಸಿದ್ದರು.

ಹಾಗೆಯೇ ಸದ್ಯದಲ್ಲೇ ಶಾಲೆಗಳನ್ನು ಯಾವಾಗ ಪ್ರಾರಂಭ ಮಾಡಬೇಕು ಎನ್ನುವುದನ್ನು ತೀರ್ಮಾನ ಮಾಡಲಾಗುತ್ತದೆ. ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವಂತ ಮಕ್ಕಳ ಪೋಷಕರು ಕೋರೊನಾ ಭಯದಿಂದ ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ. ಆದ್ದರಿಂದ ಇಡೀ ರಾಜ್ಯದ ಜನರ ಅಭಿಪ್ರಾಯವನ್ನು ಸಂಗ್ರಹ ಮಾಡಿ ತದ ನಂತರ ನಿರ್ಧಾರವನ್ನು ತೆಗೆದು ಕೊಳ್ಳಲಾಗುವುದು ಎಂದು ಹೇಳಿದ್ದರು.

 

ಕಳೆದ ತಿಂಗಳು ರಾಜ್ಯ ಶಿಕ್ಷಣ ಸಚಿವ ಸುರೇಶ್​ ಕುಮಾರ್​​​,​ ಆಗಸ್ಟ್​​ ಮೊದಲ ವಾರದಲ್ಲಿ ಎಸ್​ಎಸ್​ಎಲ್​​ಸಿ ಫಲಿತಾಂಶ ಪ್ರಕಟಿಸುವುದಾಗಿ ಘೋಷಿಸಿದ್ದರಿಂದ ಎಲ್ಲರೂ ಕಾಯುತ್ತಿದ್ದರು. ಎಸ್‌ಎಸ್‌ಎಲ್‌ಸಿ ಫಲಿತಾಂಶ ಆಗಸ್ಟ್ 7 ರೊಳಗೆ ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿತ್ತು.

ಕೊರೊನಾ ಭೀತಿ ನಡುವೆಯೂ ಸರ್ಕಾರ ಯಶಸ್ವಿಯಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಿತ್ತು. ಜೂನ್ 25ರಂದು 8.5 ಲಕ್ಷ ವಿದ್ಯಾರ್ಥಿಗಳಲ್ಲಿ ಸರಾಸರಿ ಶೇ.98ರಷ್ಟು ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದಾರೆ. ಮಾಸ್ಕ್ ಗಳನ್ನು ‌ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.‌

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

 

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್  App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

Related posts

ಕ್ರಿಕೆಟ್ ಜರ್ನಿಗೆ ವಿದಾಯ ಹೇಳಿದ ಬೌಲರ್​ ವಿನಯ್ ಕುಮಾರ್

Sushmitha Jain

ರಾಮಚಂದ್ರಾಪುರ ಮಠದಲ್ಲಿ ತ್ಯಾಗ ಪರ್ವ: ಸಾವಿರ ಭಕ್ತರಿಂದ ಸರಳ ಜೀವನ ಪ್ರತಿಜ್ಞೆ

Upayuktha

ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರೂ ಚಿಕಿತ್ಸೆಗೆ ಸ್ಪಂದನೆ: ವೈದ್ಯರ ಹೇಳಿಕೆ

Upayuktha