ಪ್ರಮುಖ ರಾಜ್ಯ

ಕರ್ನಾಟಕದ ಯಾತ್ರಿಕರಿಗಾಗಿ ಅಯೋಧ್ಯೆಯಲ್ಲಿ ಯಾತ್ರಿ ನಿವಾಸ: 2 ಎಕರೆ ಜಾಗಕ್ಕೆ ಬಿಎಸ್‌ವೈ ಮನವಿ

ಬೆಂಗಳೂರು: ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ ಪೂರ್ಣಗೊಂಡ ಬಳಿಕ ಅಲ್ಲಿಗೆ ಭೇಟಿ ನೀಡುವ ಕರ್ನಾಟಕದ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಸುಸಜ್ಜಿತ ಯಾತ್ರಿ ನಿವಾಸವೊಂದನ್ನು ನಿರ್ಮಿಸಲು ರಾಜ್ಯ ಸರಕಾರ ನಿರ್ಧರಿಸಿದೆ.

ಈ ವಿಚಾರವಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದಾರೆ. ಅಯೋಧ್ಯೆಯಲ್ಲಿ ಕರ್ನಾಟಕದ ಯಾತ್ರಿ ನಿವಾಸಿ ನಿರ್ಮಾಣಕ್ಕಾಗಿ 2 ಎಕರೆ ಭೂಮಿ ಒದಗಿಸುವಂತೆ ಕೋರಿದ್ದಾರೆ.

ಎಲ್ಲ ಭಾರತೀಯರ ಮಹಾನ್ ಕನಸಾಗಿದ್ದ ಅಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಿದ್ದಕ್ಕೆ ಉತ್ತರ ಪ್ರದೇಶ ಸರಕಾರಕ್ಕೆ ಬಿಎಸ್‌ವೈ ಅಭಿನಂದನೆ ಸಲ್ಲಿಸಿದ್ದಾರೆ.

ರಾಜ್ಯದಿಂದ ದೊಡ್ಡ ಸಂಖ್ಯೆಯ ಯಾತ್ರಿಕರು ಅಯೋಧ್ಯೆಗೆ ಭೇಟಿ ನೀಡಲಿದ್ದು, ಅವರ ವಾಸ್ತವ್ಯದ ಅನುಕೂಲಕ್ಕಾಗಿ ಅಲ್ಲಿ ಯಾತ್ರಿ ನಿವಾಸ ನಿರ್ಮಿಸಬೇಕೆಂದು ಆಯೋಧ್ಯೆ ತೀರ್ಥಕ್ಷೇತ್ರ ಟ್ರಸ್ಟ್‌ನ ಸದಸ್ಯರಾಗಿರುವ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದರು.

ಶ್ರೀಗಳ ಮನವಿಯನ್ನು ಧಾರ್ಮಿಕ ದತ್ತಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಮೂಲಕವಾಗಿ ಮುಖ್ಯಮಂತ್ರಿಗಳಿಗೆ ತಲುಪಿಸಲಾಗಿತ್ತು.

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

 

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್  App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

 

Related posts

ಗಣೇಶೋತ್ಸವಕ್ಕೆ ರಾಜ್ಯ ಸರಕಾರದಿಂದ ಷರತ್ತುಬದ್ಧ ಅನುಮತಿ

Upayuktha

ಪ್ರವಾಹ ಪರಿಸ್ಥಿತಿ ವೈಮಾನಿಕ ಸಮೀಕ್ಷೆ ನಡೆಸಿದ ; ಮುಖ್ಯಮಂತ್ರಿ ಬಿಎಸ್ ವೈ

Harshitha Harish

ಲಾಕ್‍ಡೌನ್ ನಡುವೆ ರಂಜಿಸುತ್ತಿರುವ ‘ನೃತ್ಯಾಂಟೈನ್’: ಆಳ್ವಾಸ್‌ ಕಾಲೇಜಿನ ಹಳೆ ವಿದ್ಯಾರ್ಥಿಗಳಿಂದ ಹೊಸ ಪ್ರಯೋಗ

Upayuktha