ಜಿಲ್ಲಾ ಸುದ್ದಿಗಳು

ದಕ್ಷಿಣ ಕನ್ನಡ ಸಂಪರ್ಕಿಸುವ ಕೇರಳದ ಎಲ್ಲಾ ರಸ್ತೆಗಳೂ ದಿಢೀರ್ ಬಂದ್

ಮಂಗಳೂರು: ಅನಿರೀಕ್ಷಿತ ಬೆಳವಣಿಗೆಯಲ್ಲಿ ಕರ್ನಾಟಕ ಹಾಗೂ ಕೇರಳಕ್ಕೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳನ್ನೂ ಕೇರಳ ಸರಕಾರ ಇದೀಗ ಮಣ್ಣು ಮುಚ್ಚಿ ಬಂದ್ ಮಾಡಿದೆ. ಮಂಗಳೂರು ಹಾಗೂ ಕಾಸರಗೋಡಿಗೆ ಸಂಪರ್ಕ ಕಲ್ಪಿಸುವ ಈ ಒಳ ರಸ್ತೆಗಳನ್ನು ಕಾಸರಗೋಡು ಜಿಲ್ಲಾಧಿಕಾರಿ ನೇತೃತ್ವದಲ್ಲೇ ಬಂದ್ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕಾಸರಗೋಡು ಜಿಲ್ಲಾಡಳಿತ ಈ ದಿಢೀರ್ ನಿರ್ಧಾರವನ್ನು ತೆಗೆದುಕೊಂಡಿದೆ. ಬೆರಿಪದವು, ಪಾದೆಕಲ್ಲು, ಮುಗುಳಿ ಹಾಗೂ ಪದ್ಯಾಣ ಮೊದಲಾದ ಕಡೆಗಳಿಂದ ದಕ್ಷಿಣಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಸಂಪೂರ್ಣ ಮುಚ್ಚಲಾಗಿದೆ.

ಗಡಿ ಭಾಗದ ಜನ ಇದೇ ರಸ್ತೆಯ ಮೂಲಕ ತಮ್ಮ ಕೆಲಸ ಕಾರ್ಯಗಳಿಗೆ ಮಂಗಳೂರು ಸಂಪರ್ಕಿಸುತ್ತಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇದೀಗ ಕೊರೊನಾ ಪಾಸಿಟಿವ್ ಹೆಚ್ಚಿನ ಸಂಖ್ಯೆಯಲ್ಲಿ ಹರಡುತ್ತಿರುವ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಕೇರಳ ಸರಕಾರ ಈ ನಿರ್ಧಾರವನ್ನು ಕೈಗೊಂಡಿದೆ ಎನ್ನಲಾಗಿದೆ.

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

 

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್  App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

Related posts

ರಾಮ ಮಂದಿರ ಶಿಲಾನ್ಯಾಸ: ಉಡುಪಿಯಲ್ಲಿ ಅಪರೂಪದ ರಾಮಭದ್ರಕ ಮಂಡಲ ಪೂಜೆ

Upayuktha

ಸುಬ್ರಹ್ಮಣ್ಯ: ಗೃಹರಕ್ಷಕ ಸಿಬ್ಬಂದಿಗೆ ದಿನಸಿ ಕಿಟ್ ವಿತರಣೆ

Upayuktha

ಪಡುಬಿದ್ರಿ ಬೀಚ್ ಗೆ ಶೀಘ್ರದಲ್ಲಿ ಬ್ಲೂ ಫ್ಲಾಗ್ ಮಾನ್ಯತೆ: ಉಡುಪಿ ಡಿಸಿ ಜಿ. ಜಗದೀಶ್

Upayuktha

Leave a Comment