ರಾಜ್ಯ

ಕೋಲ್ಕತ್ತಾ: ಅಗ್ನಿ ಅವಘಡ; 9 ಮಂದಿ ಸಾವು

ಕೋಲ್ಕತಾ: ಬಹುಮಹಡಿ ಕಟ್ಟಡದ 13ನೇ ಮಹಡಿಯಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಬೆಂಕಿಯಲ್ಲಿ ನಾಲ್ವರು ಅಗ್ನಿಶಾಮಕ ದಳ, ರೈಲ್ವೆ ಅಧಿಕಾರಿ, ಆರ್‌ಪಿಎಫ್ ಕಾನ್‌ಸ್ಟೆಬಲ್ ಮತ್ತು ಕೋಲ್ಕತಾ ಪೊಲೀಸರ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಸೇರಿದಂತೆ ಒಂಬತ್ತು ಮಂದಿ ಮೃತಪಟ್ಟಿದ್ದಾರೆ.

ಬಹುಮಡಿ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಒಂಬತ್ತು ಮಂದಿ ಮೃತಪಟ್ಟಿದ್ದಾರೆ ಎಂದು ಪಶ್ಚಿಮ ಬಂಗಾಳ ಸರ್ಕಾರದ ಎಂಐಸಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸುಜಿತ್ ಬೋಸ್ ತಿಳಿಸಿದ್ದಾರೆ.

ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. 6 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.

ಈ ಅವಘಡ ನಡೆದ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮೃತ ಕುಟುಂಬಕ್ಕೆ ತಲಾ 10 ಲಕ್ಷ ರೂ.ಗಳ ಪರಿಹಾರ ಮತ್ತು ಮೃತ ಕುಟುಂಬಸ್ಥರಲ್ಲಿ ಒಬ್ಬರಿಗೆ ಸರ್ಕಾರಿ ಉದ್ಯೋಗವನ್ನು ನೀಡುವುದಾಗಿ ಘೋಷಣೆ ಮಾಡಿದರು.

Related posts

ರಾಜ್ಯದಲ್ಲಿ ವೈದ್ಯರ ನೇಮಕಾತಿ ಆರಂಭ- ಡಾ.ಕೆ ಸುಧಾಕರ್

Harshitha Harish

ಫೆ. 14 ರಂದು ಡಿಕೆಶಿ ಪುತ್ರಿ ಹಾಗೂ ಕಾಫಿ ಡೇ ಸಂಸ್ಥಾಪಕ ಪುತ್ರನ ವಿವಾಹ ಕಾರ್ಯಕ್ರಮ

Harshitha Harish

ಗಾಯಕ ಎಸ್‌ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯಸ್ಥಿತಿ ಗಂಭೀರ; ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದ ವೈದ್ಯರು

Upayuktha