ನಗರ ಸ್ಥಳೀಯ

140 ಲಕ್ಷ ವೆಚ್ಚದಲ್ಲಿ ಕೊಂಚಾಡಿ ದೇವಸ್ಥಾನ ರಸ್ತೆ ಅಭಿವೃದ್ಧಿ: ಪ್ರಮುಖರೊಡನೆ ಶಾಸಕ ಡಾ.ಭರತ್ ಶೆಟ್ಟಿ ಸಭೆ

ಮಂಗಳೂರು: ನಗರದ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಂಚಾಡಿ ಶ್ರೀ ವೆಂಕಟರಮಣ ಮಹಾಲಸಾ ನಾರಾಯಣಿ ದೇವಸ್ಥಾನ ಪದವಿನಂಗಡಿ ಇದರ ಮುಂಭಾಗ ರಸ್ತೆಯ ಸಂಪೂರ್ಣ ಅಭಿವೃದ್ಧಿ ಹಾಗೂ ಕಾಂಕ್ರೀಟ್ ಕಾರ್ಯದ ಆರಂಭಕ್ಕೂ ಮುನ್ನ ನಡೆಯ ಬೇಕಾದ ಕೆಲಸ ಕಾರ್ಯಗಳ ಬಗ್ಗೆ ಪರೀಶೀಲನೆಗೆ ಆಗಮಿಸಿದ ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕರಾದ ಡಾ. ವೈ ಭರತ್ ಶೆಟ್ಟಿ ಅವರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರೊಡನೆ ಸಮಾಲೋಚನೆ ನಡೆಸಿ ಪ್ರಮುಖರಿಂದ ಸಲಹೆಗಳನ್ನು ಸ್ವೀಕರಿಸಿದರು.

ರಸ್ತೆಗಾಗಿ ಮಲೆನಾಡು ಅಭಿವೃದ್ಧಿ ನಿಗಮದಿಂದ 40 ಲಕ್ಷ ಹಾಗೂ ಮಹಾತ್ಮ ಗಾಂಧಿ ನಗರ ಯೋಜನೆಯಿಂದ 1 ಕೋಟಿ ರೂಪಾಯಿ ಅನುದಾನವನ್ನು ಮೀಸಲಿಟ್ಟಿದ್ದು ಶೀಘ್ರದಲ್ಲಿ ಕಾಮಗಾರಿ ಪ್ರಾರಂಭಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಪಾಲಿಕೆಯ ಸದಸ್ಯೆ ಸಂಗೀತ ಅರ್ ನಾಯಕ್, ಜಿಲ್ಲಾ ಕಾರ್ಯದರ್ಶಿ ಪೂಜಾ ಪೈ, ಮಂಡಲ ಪ್ರಧಾನ ಕಾರ್ಯದರ್ಶಿ ಸಂದೀಪ್ ಬೊಂದೆಲ್, ದೇವಸ್ಥಾನದ ಆಡಳಿತ ಮಂಡಳಿಯ ಕಸ್ತೂರಿ ಸದಾಶಿವ ಪೈ, ವಾಸುದೇವ್ ಕಾಮತ್, ಮಾರೂರು ಶಶಿಧರ್ ಪೈ, ಉರ್ವಿ ರಾಧಾಕೃಷ್ಣ ಶೆಣೈ, ಪ್ರಶಾಂತ್ ಪೈ, ಸೂರಜ್ ಕಾಮತ್, ಅರುಣ್ ಕಾಮತ್, ಮಲೆನಾಡು ಅಭಿವೃದ್ಧಿ ಅಧಿಕಾರಿಗಳು, ನಿರ್ಮಿತಿ ಕೇಂದ್ರದ ಅಧಿಕಾರಿಗಳು, ಮಹಾನಗರ ಪಾಲಿಕೆಯ ಅಧಿಕಾರಿಗಳು ಮತ್ತು ಇತರರು ಉಪಸ್ಥಿತರಿದ್ದರು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Related posts

ಸಾಹಿತ್ಯ ಸಂಸ್ಕೃತಿ ವೇದಿಕೆಯಿಂದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ

Upayuktha

ಮನೆಯ ತಾರಸಿಯಲ್ಲಿ ತೋಟ ಅಭಿವೃದ್ಧಿ ತರಬೇತಿ ಜ.4ಕ್ಕೆ

Upayuktha

ತುಂಬೆ ಡ್ಯಾಂನಲ್ಲಿ 7 ಮೀಟರ್ ನೀರು ನಿಲುಗಡೆಗೆ ಕ್ರಮ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ ಪೊನ್ನುರಾಜ್ ಸೂಚನೆ

Upayuktha