ಜಿಲ್ಲಾ ಸುದ್ದಿಗಳು

ಮಂಗಳೂರು – ಪೂನಾ: ನಾನ್ ಎಸಿ. ಸ್ಲೀಪರ್ ಬಸ್ ಸೌಲಭ್ಯ ಪುನರಾರಂಭ

ಮಂಗಳೂರು: ಕೆಎಸ್‍ಆರ್‌ಟಿಸಿ ಮಂಗಳೂರು ವಿಭಾಗದ ಬಸ್ಸು ನಿಲ್ದಾಣದಿಂದ ಪೂನಾಗೆ ಸಾರ್ವಜನಿಕರ ಬೇಡಿಕೆಗನುಗುಣವಾಗಿ ನಾನ್ ಎ.ಸಿ. ಸ್ಲೀಪರ್ ವಾಹನಗಳೊಂದಿಗೆ ಸಾರಿಗೆ ಸೌಲಭ್ಯವನ್ನು ಅಕ್ಟೋಬರ್ 26 ರಿಂದ ಪುನ: ಆರಂಭಿಸಲಾಗಿದೆ.

ಮಂಗಳೂರಿನಿಂದ ನಾನ್ ಎಸಿ. ಸ್ಲೀಪರ್ ಬಸ್ ಸಂಜೆ 4 ಗಂಟೆಗೆ ಹೊರಟು ಸುರತ್ಕಲ್, ಮೂಲ್ಕಿ, ಉಡುಪಿ, ಕುಂದಾಪುರ, ಭಟ್ಕಳ, ಅಂಕೋಲಾ, ಬೆಳಗಾವಿ, ಸತಾರ ಮೂಲಕ ಪೂನಾಕ್ಕೆ ಬೆಳಿಗ್ಗೆ 6 ಗಂಟೆಗೆ ತಲುಪಲಿದೆ. ಪೂನಾದಿಂದ ಸಂಜೆ 6.30 ಕ್ಕೆ ಸತಾರ, ಬೆಳಗಾವಿ, ಅಂಕೋಲಾ, ಭಟ್ಕಳ, ಕುಂದಾಪುರ, ಉಡುಪಿ, ಪಡುಬಿದ್ರಿ, ಮೂಲ್ಕಿ, ಸುರತ್ಕಲ್ ಮೂಲಕ ಮಂಗಳೂರಿಗೆ ಬೆಳಿಗ್ಗೆ 7 ಗಂಟೆಗೆ ತಲುಪಲಿದೆ. ಪ್ರಯಾಣ ದರ ರೂ. 1,500.

ಪ್ರಯಾಣಿಕರ ಅನುಕೂಲಕ್ಕಾಗಿ ಹಾಗೂ ಆರೋಗ್ಯದ ಹಿತದೃಷ್ಟಿಯಿಂದಾಗಿ ನಿಗಮದ ಎಸ್‍ಒಪಿ ನಿರ್ದೇಶನಗಳಂತೆ ಪ್ರಯಾಣಿಸಲು ಅವಕಾಶಗಳನ್ನು ಕಲ್ಪಿಸಲಾಗುತ್ತದೆ. ಮುಂಗಡ ಟಿಕೇಟು ಬುಕ್ಕಿಂಗ್ ವ್ಯವಸ್ಥೆಗಾಗಿ ಆನ್‍ಲೈನ್ ನಲ್ಲಿ www.ksrtc.in ಅಥವಾ ಹತ್ತಿರದ ರಿಸರ್ವೇಶನ್ ಕೌಂಟರ್‌ ಅನ್ನು ಸಂಪರ್ಕಿಸಬಹುದು ಎಂದು ಕೆಎಸ್‍ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

Related posts

ಕೋವಿಡ್‌ 19 ಅಪ್‌ಡೇಟ್ಸ್‌: ದ.ಕ- 14, ಉಡುಪಿ 13 ಕೊರೊನಾ ಪ್ರಕರಣ

Upayuktha

ಕೊರೊನಾ ಅಪ್‌ಡೇಟ್: ದ.ಕ.- 5, ಉಡುಪಿ- 21, ಕರ್ನಾಟಕ- 176

Upayuktha

ಬೆಳಗಾವಿ ಡಿಸಿ ಮನೆಯ ಗಾರ್ಡ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಶರಣು

Upayuktha

Leave a Comment