ಕ್ಷೇತ್ರಗಳ ವಿಶೇಷ ಜಿಲ್ಲಾ ಸುದ್ದಿಗಳು

ಸುಕ್ಷೇತ್ರ ಕುಪ್ಪೂರು ಗದ್ದುಗೆ ಸಂಸ್ಥಾನ ಮಠದ ಜಾತ್ರಾ ಮಹೋತ್ಸವ ವೈಭವದಿಂದ ಸಂಪನ್ನ

ತುಮಕೂರು: ಚಿಕ್ಕನಾಯಕನಹಳ್ಳಿಯ ಸುಕ್ಷೇತ್ರ ಕುಪ್ಪೂರು ಗದ್ದುಗೆ ಸಂಸ್ಥಾನ ಮಠದಲ್ಲಿ ಶ್ರೀಗುರು ಮರುಳಸಿದ್ಧೇಶ್ವರ ಜಾತ್ರಾ ಮಹೋತ್ಸವ ಮತ್ತು ಜನಜಾಗೃತಿ ಭಾವೈಕ್ಯ ಧರ್ಮ ಸಮ್ಮೇಳನವು ಬುಧವಾರ ಮತ್ತು ಗುರುವಾರ ನಡೆಯಿತು.

ಎಡೆಯೂರು ಕ್ಷೇತ್ರದ ಶ್ರೀ ರೇಣುಕ ಶಿವಾಚಾರ್ಯ ಸ್ವಾಮೀಜಿ ಜಾತ್ರಾ ಮಹೋತ್ಸದ ಉದ್ಘಾಟನೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಧಾರ್ಮಿಕ ಕ್ಷೇತ್ರಗಳು ಭಕ್ತಿ ಭಾವ ತುಂಬುವ ಪವಿತ್ರ ತಾಣಗಳಾಗಿವೆ. ಆ ನಿಟ್ಟಿನಲ್ಲಿ ಮರುಳ ಸಿದ್ಧೇಶ್ವರ ಕ್ಷೇತ್ರವು ಜಾಗೃತಿ ಮೂಡಿಸುವ ತಾಣವೂ ಆಗಿದೆ ಎಂದು ನುಡಿದರು.

ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ ಮಾಧುಸ್ವಾಮಿ ಅವರು ಉದ್ಘಾಟನೆ ನೆರವೇರಿಸಿದ ಬಳಿಕ ಶ್ರೀಚಕ್ರಾರ್ಚನ ಚಂದ್ರಿಕಾ ಕೃತಿಯನ್ನು ಬಿಡುಗಡೆ ಮಾಡಿದರು. ಮರುಳಸಿದ್ಧೇಶ್ವರ ಭಾವಚಿತ್ರವನ್ನು ಹೊನ್ನವಳ್ಳಿ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ಹಾಗೂ ಕ್ಯಾಲೆಂಡರನ್ನು ಮಾದೀಹಳ್ಳಿ ಚೆನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಬಿಡುಗಡೆ ಮಾಡಿದರು.

ಜಾತ್ರಾ ಮಹೋತ್ಸವದಲ್ಲಿ ಧರ್ಮರತ್ನಾಕರ ಪ್ರಶಸ್ತಿಯನ್ನು ಪಿ.ಎಸ್‌ ದಯಾನಂದ ಅವರಿಗೆ,  ಧರ್ಮನಂದಿನಿ ಪ್ರಶಸ್ತಿಯನ್ನು ವೆಂಕಟಮ್ಮನವರಿಗೆ ಪ್ರದಾನ ಮಾಡಲಾಯಿತು. ಕುಪ್ಪೂರು ಮರುಳಸಿದ್ಧಶ್ರೀ ಪ್ರಶಸ್ತಿಯನ್ನು ಖ್ಯಾತ ಪರಿಸರಪ್ರೇಮಿ, ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರಿಗೆ ನೀಡಲು ನಿರ್ಧರಿಸಲಾಗಿತ್ತು. ಆದರೆ ಕಾರಣಾಂತರದಿಂದ ಅವರು ಭಾಗವಹಿಸದ ಕಾರಣ ಅವರಿಗೆ ಪ್ರಶಸ್ತಿಯನ್ನು ತಲುಪಿಸುವ ವ್ಯವಸ್ಥೆ ಮಾಡಲಾಯಿತು.

ಜಾತ್ರಾಮಹೋತ್ಸವದ ಅಂಗವಾಗಿ ಮರುಳಸಿದ್ಧೇಶ್ವರ ಬೆಳ್ಳಿ ಅಡ್ಡಪಲ್ಲಕ್ಕಿ ಉತ್ಸವ, ಋಷಭೋತ್ಸವ, ಅನ್ನಸಂತರ್ಪಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆದವು. ಮಠದ ಡಾ. ಯತೀಶ್ವರ ಶಿವಾಚಾರ್ಯರ ದಿವ್ಯ ಸಾನಿಧ್ಯ ಹಾಗೂ ನೇತೃತ್ವದಲ್ಲಿ ಶ್ರೀಗುರು ಮರುಳ ಸಿದ್ಧೇರ್ಶವರ ಸ್ವಾಮಿಯವರ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಉತ್ಸವದಲ್ಲಿ ಜಿಲ್ಲೆ ಹಾಗೂ ತಾಲೂಕಿನ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

Related posts

ಚಾಲಿಪೋಲಿಲು ಖ್ಯಾತಿಯ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣ

Harshitha Harish

ಮಂಗಳೂರಿನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿವಿ ಪ್ರಾದೇಶಿಕ ಕೇಂದ್ರ ಸ್ಥಾಪನೆಗೆ ಗುದ್ದಲಿ ಪೂಜೆ

Upayuktha

ಅಯೋಧ್ಯೆ: ರಾಮ ಮಂದಿರ ಭೂಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Harshitha Harish