ರಾಜ್ಯ

ಪರಿಷತ್‌ ಉಪಸಭಾಪತಿ ಧರ್ಮೇಗೌಡರ ದುರಂತ ಸಾವಿಗೆ ಗಣ್ಯರ ಶೋಕ

ಬೆಂಗಳೂರು: ವಿಧಾನ ಪರಿಷತ್ ಉಪಸಭಾಪತಿ ಎಸ್‌.ಎಲ್ ಧರ್ಮೇಗೌಡರ ಅಕಾಲಿಕ ನಿಧನದ ಸುದ್ದಿ ದಿಗ್ಭ್ರಮೆ ಮೂಡಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆಘಾತ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಇದನ್ನು ನಂಬಲಿಕ್ಕೇ ಆಗುತ್ತಿಲ್ಲ. ಶಾಸಕರಾಗಿ, ಉಪಸಭಾಪತಿಗಳಾಗಿ ಜನಮನ್ನಣೆ ಗಳಿಸಿದ್ದ ಅವರ ದುರಂತ ಸಾವು ಅತ್ಯಂತ ದುಃಖ ಉಂಟುಮಾಡಿದೆ. ಹಿರಿಯ ಅಧಿಕಾರಿಗಳಿಂದ ಘಟನೆಯ ವಿವರ ಪಡೆದುಕೊಳ್ಳುತ್ತಿದ್ದೇನೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ಅವರ ಆತ್ಮಕ್ಕೆ ಸದ್ಗತಿಯನ್ನು ಕೋರುತ್ತಾ, ಅವರ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ- ಎಂದು ಸಿಎಂ ಬಿಎಸ್‌ವೈ ಶೋಕಿಸಿದ್ದಾರೆ.

ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರ ಸಂತಾಪ:

ವಿಧಾನಪರಿಷತ್ ಉಪಸಭಾಪತಿ ಹಾಗೂ ಜೆಡಿಎಸ್‌ ಮುಖಂಡರಾದ ಎಸ್.ಎಲ್. ಧರ್ಮೇಗೌಡರು ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ಕೇಳಿ ಆಘಾತವಾಗಿದೆ. ಸಜ್ಜನ, ಸನ್ನಡತೆಯ ಉಪಸಭಾಪತಿಗಳನ್ನು ಕಳೆದುಕೊಂಡದ್ದು ನಮ್ಮ ರಾಜ್ಯದ ನಷ್ಟ. ಅವರ ಕುಟುಂಬ ಹಾಗೂ ಬಂಧುಮಿತ್ರರಿಗೆ ಈ ನೋವು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ದೇವೇಗೌಡರು ಶೋಕಿಸಿದ್ದಾರೆ.

ಎಚ್‌ಡಿಕೆ ಸಂತಾಪ:
ವಿಧಾನಪರಿಷತ್ ಉಪಸಭಾಪತಿ ಹಾಗೂ ಜೆಡಿಎಸ್‌ ಪಕ್ಷದ ಹಿರಿಯ ಮುಖಂಡರಾದ ಎಸ್‌.ಎಲ್ ಧರ್ಮೇಗೌಡರ ಆತ್ಮಹತ್ಯೆ ಸುದ್ದಿ ತೀವ್ರ ಆಘಾತ ಉಂಟುಮಾಡಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ನಿಷ್ಕಲ್ಮಶ ವ್ಯಕ್ತಿತ್ವದ ಸಜ್ಜನ ರಾಜಕಾರಣಿಯೊಬ್ಬರನ್ನು ನಾವು ಕಳೆದುಕೊಂಡಿದ್ದೇವೆ. ಧರ್ಮೇಗೌರಡ ಕುಟುಂಬ ಮತ್ತು ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಎಚ್‌ಡಿಕೆ ತಮ್ಮ ಟ್ವೀಟ್ ಸಂದೇಶದಲ್ಲಿ ಸಂತಾಪ ಸೂಚಿಸಿದ್ದಾರೆ.

ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಧರ್ಮೇಗೌಡರ ಸಾವಿಗೆ ಆಘಾತ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರು ಧರ್ಮೇಗೌಡರ ಅಕಾಲಿಕ ದುರ್ಮರಣಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ.

ಆತ್ಮೀಯರೂ, ವಿಧಾನಪರಿಷತ್ತಿನ ಮಾನ್ಯ ಉಪಸಭಾಪತಿ ಯವರಾಗಿದ್ದ ಶ್ರೀ ಎಸ್ ಎಲ್ ಧರ್ಮೇಗೌಡ ಅವರು ಅಕಾಲಿಕವಾಗಿ ನಮ್ಮನ್ನಗಲಿದ್ದಾರೆ. ಅಗಲಿದ ಅವರ ಆತ್ಮಕ್ಕೆ ಶಾಂತಿ ಪ್ರಾಪ್ತಿಯಾಗಲಿ, ಅವರ ಕುಟುಂಬಕ್ಕೆ, ಅಭಿಮಾನಿ ವರ್ಗಕ್ಕೆ ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಶ್ರೀದೇವರು ಕರುಣಿಸಲಿ ಎಂದು ಪ್ರಾರ್ಥಿಸೋಣ. #ಓಂಶಾಂತಿಃ #OmShanthi ಎಂದು ಸಿ.ಟಿ ರವಿ ಟ್ವೀಟ್ ಮಾಡಿದ್ದಾರೆ.

 

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

Related posts

ಗಲಭೆಯಲ್ಲಿ ಕಾಂಗ್ರೆಸ್ ಮುಖವಾಡ ಬಯಲು: ಡಿಸಿಎಂ ಸವದಿ ಟೀಕೆ

Upayuktha

ಕೆಟ್ಟ ಮೇಲೆ ಬುದ್ಧಿ ಕಲಿತ ಕೇರಳ ಸರ್ಕಾರದಿಂದ ಈಗ ಆತ್ಮನಿರ್ಭರ ಮಂತ್ರ

Upayuktha News Network

ಮತ್ತೆ ಲಾಕ್ಡೌನ್ ಮಾಡುವ ಯಾವುದೇ ಚಿಂತನೆ ಸರ್ಕಾರಕ್ಕಿಲ್ಲ- ಸುಧಾಕರ್

Harshitha Harish