ಚೆನ್ನೈ: ನಾದಬ್ರಹ್ಮ, ಗಾನ ಗಂಧರ್ವ ಎಸ್.ಪಿ ಬಾಲಸುಬ್ರಹ್ಮಣ್ಯಂ (74) ಅವರು ಶುಕ್ರವಾರ ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ. ಕೋವಿಡ್ 19 ಸೋಂಕಿಗೆ ಒಳಗಾಗಿ ತೀವ್ರ ಅನಾರೋಗ್ಯಕ್ಕೆ ಒಳಗಾದ ಬಾಲಸುಬ್ರಹ್ಮಣ್ಯಂ ಅವರನ್ನು ಆಗಸ್ಟ್ 5ರಂದು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಒಂದು ಹಂತದಲ್ಲಿ ಕೊರೋನಾ ಸೋಂಕಿನಿಂದ ಅವರು ಮುಕ್ತರಾದರೂ ಆರೋಗ್ಯ ಸ್ಥಿತಿ ಚೇತರಿಕೆಯಾಗಲಿಲ್ಲ.
ಗುರುವಾರ ಸಂಜೆ ಎಸ್ಪಿಬಿ ಅವರು ಈಗಲೂ ಕೃತಕ ಉಸಿರಾಟ ಯಂತ್ರದ ಬೆಂಬಲದಲ್ಲೇ ಇದ್ದು, ಚೇತರಿಸಿಕೊಳ್ಳುವ ಲಕ್ಷಣ ಕಾಣಿಸುತ್ತಿಲ್ಲ. ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದೆ ಎಂದು ಚೆನ್ನೈನ ಎಂಜಿಎಂ ಆಸ್ಪತ್ರೆಯ ವೈದ್ಯರು ಪ್ರಕಟಣೆಯಲ್ಲಿ ತಿಳಿಸಿದ್ದರು.
ಶುಕ್ರವಾರ ಮುಂಜಾನೆ ಎಸ್ಪಿಬಿ ಅವರ ಆರೋಗ್ಯ ಬಿಗಡಾಯಿಸಿತು. ನಮ್ಮ ತಜ್ಞ ವೈದ್ಯರ ತಂಡದ ಶ್ರಮ ಕೈಗೂಡಲಿಲ್ಲ. ಹೃದಯ ಸ್ತಂಭನಗೊಂಡು ಅಪರಾಹ್ನ 1.04 ರ ವೇಳೆಗೆ ಗಾಯಕ ಬಾಲಸುಬ್ರಹ್ಮಣ್ಯಂ ಅವರು ಮೃತಪಟ್ಟರು ಎಂದು ಆಸ್ಪತ್ರೆ ಪ್ರಕಟಿಸಿತು.
ಬಹುಭಾಷಾ ಗಾಯಕರಾಗಿದ್ದ ಬಾಲಸುಬ್ರಹ್ಮಣ್ಯಂ ಅವರು ಕನ್ನಡ, ತುಳು, ತಮಿಳು, ತೆಲುಗು, ಹಿಂದಿ, ಮಲಯಾಳ ಸಹಿತ ಅನೇಕ 16 ಭಾಷೆಗಳಲ್ಲಿ ಒಟ್ಟಾರೆ 40,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಆರು ರಾಷ್ಟ್ರಪ್ರಶಸ್ತಿಗಳನ್ನು ಗಳಿಸಿಕೊಂಡ ಹಿರಿಮೆ ಅವರದಾಗಿದೆ. ಪದ್ಮಶ್ರೀ ಹಾಗೂ ಪದ್ಮಭೂಷಣ ಪುರಸ್ಕಾರಗಳು ಅವರಿಗೆ ಸಂದಿದ್ದವು.
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಟ್ವಿಟರ್ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ
ಯೂಟ್ಯೂಬ್ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್ App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.