ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾದ ಅಜಿತ್ ಪವಾರ್ ಅವರಿಗೆ ಕೋವಿಡ್ ವೈರಸ್ ಸೋಂಕು ತಗುಲಿದ್ದು ಸೋಮವಾರ ಮಾಹಿತಿ ತಿಳಿದು ಬಂದಿದೆ.
ಈ ಬಗ್ಗೆ ಮಹಾರಾಷ್ಟ್ರ ರಾಜ್ಯ ಉಪ ಮುಖ್ಯಮಂತ್ರಿಗಳ ಕಚೇರಿ ಮಾಹಿತಿ ನೀಡಿದ್ದು, ಅಜಿತ್ ಪವಾರ್ ಅವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಅವರನ್ನು ಮುಂಬೈ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿಸಿದ್ದಾರೆ.
ಅವರು ಕೆಲ ದಿನಗಳ ಹಿಂದೆ ಅಜಿತ್ ಪವಾರ್ ಅವರು ಪ್ರವಾಹ ಪೀಡಿದ ಪ್ರದೇಶಗಳಾದ ಪುಣೆ ಹಾಗೂ ಸೊಲ್ಲಾಪುರ ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಇದಾದ ಬಳಿಕ ಅವರಲ್ಲಿ ಜ್ವರ ಹಾಗೂ ಕೆಲ ಲಕ್ಷಣಗಳು ಕಾಣಿಸಿಕೊಂಡಿತ್ತು.
ನಂತರ ಕೊರೋನಾ ಟೆಸ್ಟ್ ಮಾಡಿಸಿದರು ಆಗ ಫಲಿತಾಂಶ ನೆಗೆಟಿವ್ ಬಂದಿತ್ತು. ನಂತರ ಅವರು ಮುಂಜಾಗ್ರತಾ ಕ್ರಮವಾಗಿ ಕ್ವಾರಂಟೈನ್ ನಲ್ಲಿರುವುದಾಗಿ ತಿಳಿಸಿದ್ದರು.
ಇದಾದ ನಂತರ ಮತ್ತೆ ಅಜಿತ್ ಅವರನ್ನು ಪರೀಕ್ಷೆಗೊಳಪಡಿಸಲಾಯಿತು. ಇದೀಗ ವೈದ್ಯಕೀಯ ವರದಿಯಲ್ಲಿ ಸೋಂಕು ತಗುಲಿದೆ ಎಂದು ವರದಿಯಾಗಿದೆ.