ಅಪಘಾತ- ದುರಂತ ಜಿಲ್ಲಾ ಸುದ್ದಿಗಳು

ರಾಸಾಯನಿಕ ಕಾರ್ಖಾನೆ ಯಲ್ಲಿ ಸ್ಫೋಟ; 2 ಮಂದಿ ಸಾವು, 6 ಮಂದಿ ಗಾಯ

ಮುಂಬೈ: ಮಹಾರಾಷ್ಟ್ರದ ರಾಯಗಢ ಲ್ಲೆಯಲ್ಲಿ ರಾಸಾಯನಿಕ ಕಾರ್ಖಾನೆ ಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಎರಡು ಜನ ಸಾವಿಗೀಡಾಗಿದ್ದು, ಆರು ಮಂದಿ ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ.

ಇಂದು ಮಧ್ಯರಾತ್ರಿ 2.30 ಗಂಟೆ ಸುಮಾರಿಗೆ ಈ ಸ್ಫೋಟ ಸಂಭವಿಸಿದ್ದು ರಾಯಗಢ ಜಿಲ್ಲೆಯ ಖೊಪೊಲಿ ಪಟ್ಟಣದ ಸಜ್ಗೌನ್ ಕೈಗಾರಿಕಾ ಪ್ರದೇಶದಲ್ಲಿರುವ ರಾಸಾಯನಿಕ ಫ್ಯಾಕ್ಟರಿಯಲ್ಲಿ ಈ ಸ್ಪೋಟ ಸಂಭವಿಸಿದೆ ಆ ನಂತರ ಫ್ಯಾಕ್ಟರಿಯ ಆವರಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಈ ಅವಘಡ ಸಂಭವಿಸಿ ಮೃತಪಟ್ಟವರಲ್ಲಿ ಒಬ್ಬ ಮಹಿಳೆ ಕೂಡ ಸೇರಿದ್ದು. ಇತರ 6ಜನಕ್ಕೆ ಗಾಯವಾಗಿದೆ. ಘಟನೆ ನಡೆದ ತಕ್ಷಣವೇ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿಯವರು ಸ್ಥಳಕ್ಕೆ ಬಂದು ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ಮತ್ತು ಕಾರ್ಮಿಕರನ್ನು ರಕ್ಷಣೆ ಮಾಡುವ ಕಾರ್ಯದಲ್ಲಿ ನಿರತರಾದರು ಎಂದು ಖೊಪೊಲಿ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಗೊಂಡ ಕಾರ್ಮಿಕರನ್ನು ಖೊಪೊಲಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

 

Related posts

ರಾಜ್ಯಾದ್ಯಂತ ಮರುಹುಟ್ಟು ಪಡೆಯುತ್ತಿರುವ ನೂರಾರು ಪ್ರಾಚೀನ ಕೆರೆಗಳು

Upayuktha

ಉಡುಪಿ ಜಿಲ್ಲೆಯಲ್ಲಿ ಶೀಘ್ರವೇ ಸರ್ಕಾರಿ ಕೋವಿಡ್ ಪರೀಕ್ಷಾ ಲ್ಯಾಬ್: ಸಚಿವ ಡಾ. ಸುಧಾಕರ್

Upayuktha

ಖ್ಯಾತ ಕುಟುಂಬ ವೈದ್ಯ, ನೇತ್ರ ತಜ್ಞ ಡಾ. ಜಯಪ್ರಕಾಶ್ ಖಂಡಿಗೆ ನಿಧನ

Upayuktha