ಕ್ಯಾಂಪಸ್ ಸುದ್ದಿ ಜಿಲ್ಲಾ ಸುದ್ದಿಗಳು ಶಿಕ್ಷಣ

ನಾಳೆ (ಡಿ.19) ಮಂಗಳೂರು ವಿವಿ ಸಂಸ್ಥಾಪನಾ ದಿನಾಚರಣೆ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಯನ್ನ 41ನೇ ಸಂಸ್ಥಾಪನಾ ದಿನವನ್ನು ನಾಳೆ (ಡಿ.19) ಶನಿವಾರ ಬೆಳಗ್ಗೆ 11 ಗಂಟೆಗೆ ಮಂಗಳಗಂಗೋತ್ರಿಯ ಮಂಗಳ ಸಭಾಂಗಣದಲ್ಲಿ ಆಚರಿಸಿಕೊಳ್ಳಲಿದೆ.

ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಸಚಿವ ಡಾ. ಅಶ್ವತ್ಥ ನಾರಾಯಣ ಸಿ.ಎನ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ವಿವಿ ಸಿಂಡಿಕೇಟ್ ಸದಸ್ಯರಾದ ಪ್ರೊ. ಕರುಣಾಕರ್‌ ಎ. ಕೋಟೆಕಾರ್‌ ಅವರು ಪ್ರಸ್ತುತಪಡಿಸಿರುವ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ವೀಡಿಯೋ ಸರಣಿಯನ್ನೂ ಅವರು ಈ ಸಂದರ್ಭದಲ್ಲಿ ಬಿಡುಗಡೆ ಮಾಡಲಿದ್ದಾರೆ.

ಭಾರತೀಯ ಅಣು ವಿದ್ಯುತ್ ನಿಗಮ ನಿಯಮಿತ, ಕೈಗಾ ಅಣು ವಿದ್ಯುತ್ ಸ್ಥಾವರದ ನಿರ್ದೇಶಕ ಆರ್. ಸತ್ಯನಾರಾಯಣ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿರುತ್ತಾರೆ. ಮಂಗಳೂರು ವಿವಿ ಕುಲಪತಿ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಕುಲಸಚಿವ ಕೆ. ರಾಜು ಮೊಗವೀರ ಅವರ ಪ್ರಕಟಣೆ ತಿಳಿಸಿದೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

Related posts

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಮಾರ್ಚ್‌ 5 ರಂದು ಕೆರಿಯರ್‌ ಡೇ

Upayuktha

ಮಂಗಳೂರು: ಉಳ್ಳಾಲದ ಕಾಲೇಜ್ 40 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಪತ್ತೆ; ಕಾಲೇಜು ಸೀಲ್ ಡೌನ್

Harshitha Harish

ಫಿಲೋಮಿನಾದಲ್ಲಿ ಪ್ರಥಮ ಚಿಕಿತ್ಸಾ ತರಬೇತಿ ಕಾರ್ಯಾಗಾರ

Upayuktha