ಕ್ಯಾಂಪಸ್ ಸುದ್ದಿ ಜಿಲ್ಲಾ ಸುದ್ದಿಗಳು ಶಿಕ್ಷಣ

ಶೀಘ್ರದಲ್ಲೇ ಪದವಿ ವಿದ್ಯಾರ್ಥಿಗಳಿಗೆ ಪರಿಷ್ಕೃತ ಶೈಕ್ಷಣಿಕ ವಾರ್ಷಿಕ ವೇಳಾಪಟ್ಟಿ

ವಿವಿ ಕಾಲೇಜು ಭೇಟಿಯ ವೇಳೆ ಮಂಗಳೂರು ವಿವಿ ಕುಲಸಚಿವ ಕೆ. ರಾಜು ಮೊಗವೀರ ಮಾಹಿತಿ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಶೀಘ್ರದಲ್ಲೇ ಯುಜಿಸಿ ನಿಯಮಗಳನ್ನು ಆಧರಿಸಿ ನವೀಕೃತ ವಾರ್ಷಿಕ ವೇಳಾಪಟ್ಟಿ ಪ್ರಕಟಿಸಲಿದ್ದು ವಿದ್ಯಾರ್ಥಿಗಳು, ಪೋಷಕರು ಮತ್ತು ಪ್ರಾಧ್ಯಾಪಕರು ಆತಂಕಿತರಾಗಬೇಕಿಲ್ಲ ಎಂದು ಕುಲಸಚಿವ ಕೆ. ರಾಜು ಮೊಗವೀರ (ಕೆ.ಎ.ಎಸ್) ಹೇಳಿದ್ದಾರೆ.

ಕುಲಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ನಗರದ ವಿಶ್ವವಿದ್ಯಾನಿಲಯ ಕಾಲೇಜಿಗೆ ಬುಧವಾರ ಮೊದಲ ಬೇಟಿ ನೀಡಿದ ಅವರು, ಕಾಲೇಜಿನ ಬೋಧಕ- ಬೋಧಕೇತರ ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿದರು. ಪದವಿಯ ಎಲ್ಲಾ ವಿದ್ಯಾರ್ಥಿಗಳಿಗೆ ತರಗತಿ ಪಾಠ ಆರಂಭಿಸುವ ಕುರಿತು ಪ್ರಯತ್ನಗಳು ನಡೆಯುತ್ತಿವೆ. ಈ ನಿಟ್ಟಿನಲ್ಲಿ ವಿವಿಧ ಕಾಲೇಜುಗಳ ಪ್ರಾಂಶುಪಾಲರುಗಳ ಸಭೆಯನ್ನೂ ನಡೆಸಲಾಗಿದೆ. ವಿದ್ಯಾರ್ಥಿಗಳಿಗೂ ಕಾಲೇಜಿಗೆ ಬರುವ ಆತ್ಮವಿಶ್ವಾಸ ಮೂಡುವುದು ಮುಖ್ಯ, ಎಂದರು. ಇದೇ ವೇಳೆ ಅವರು ಅತಿಥಿ ಉಪನ್ಯಾಸಕರುಗಳ ನೇಮಕಾತಿ ಪಟ್ಟಿಯನ್ನು ಇದೇ ವಾರಾಂತ್ಯಕ್ಕೆ ಬಿಡುಗಡೆ ಮಾಡುವ ಭರವಸೆ ನೀಡಿದರು.

ಭವ್ಯ ಇತಿಹಾಸವಿರುವ ವಿವಿ ಕಾಲೇಜಿನಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿಕೊಂಡ ಅವರು, “ಮಂಗಳೂರು ವಿಶ್ವವಿದ್ಯಾನಿಲಯ ಎಲ್ಲಾ ಅಗತ್ಯ ನೆರವು ನೀಡಲಿದೆ. ಆದರೆ ಕಾಲೇಜುಗಳು ತಮಗಿರುವ ಸ್ವಾತಂತ್ರ್ಯವನ್ನು ಬಳಸಿಕೊಳ್ಳುವುದು ಅಗತ್ಯ,” ಎಂದರು. ಕಾಲೇಜಿನ ಸ್ವಚ್ಛತೆ, ಪೀಠೋಪಕರಣಗಳ ನಿರ್ವಹಣೆ, ಪ್ರಥಮ ಚಿಕಿತ್ಸೆ ವ್ಯವಸ್ಥೆ ಮೊದಲಾದ ವಿಷಯಗಳ ಕುರಿತು ಗಮನಹರಿಸುವಂತೆ ಸಲಹೆ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಡಾ. ಹರೀಶ್‌ ಎ, ವಿಶ್ವವಿದ್ಯಾನಿಲಯದ ಎಂಜಿನಿಯರಿಂಗ್‌ ವಿಭಾಗದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

Related posts

ಪಿಯುಸಿ ವಿದ್ಯಾರ್ಥಿನಿಗೆ ಅಂಕದಲ್ಲಿ ಎಡವಟ್ಟು

Harshitha Harish

ವಿವೇಕಾನಂದ ಕಾಲೇಜಿನಲ್ಲಿ ರಾಜ್ಯ ಮಟ್ಟದ ಐಟಿ-ಫೆಸ್ಟ್ ‘ಟೆಕ್ನೋತರಂಗ್ 2020’ಗೆ ಚಾಲನೆ

Upayuktha

ಆಳ್ವಾಸ್‌ ಕ್ಯಾಂಪಸ್‌ನಲ್ಲಿ ಸೂರ್ಯಗ್ರಹಣ ವೀಕ್ಷಣೆ

Upayuktha