ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ವಿವೇಕಾನಂದ ವಸತಿ ನಿಲಯದಲ್ಲಿ ಸಾಮೂಹಿಕ ಹುಟ್ಟುಹಬ್ಬ ಆಚರಣೆ

ಪುತ್ತೂರು: ಪ್ರತಿಯೊಬ್ಬರ ಜೀವನದಲ್ಲಿ ಹುಟ್ಟು ಹಬ್ಬ ವಿಶೇಷ ಸ್ಥಾನವನ್ನು ಪಡೆದುಕೊಂಡಿರುತ್ತದೆ. ನಮ್ಮ ಜನನ ಸಾರ್ಥಕವಾಗುವಂತೆ ನಾವು ಸಾಧನೆಮಾಡಬೇಕು. ಅಂತಹ ಸಾಧನೆಯನ್ನು ಸಾಧಿಸುವುದಕ್ಕೆ ನಿರಂತರ ಪ್ರಯತ್ನ ಪಡಬೇಕು ಎಂದು ಕರ್ನಾಟಕ ಉಚ್ಚ ನ್ಯಾಯಾಲಯದಿಂದ ನ್ಯಾಯಾಧೀಶರಾಗಿ ಆಯ್ಕೆಗೊಂಡ ವಿದ್ಯಾ ಎ.ಎಸ್ ಹೇಳಿದರು.

ಅವರು ಪುತ್ತೂರಿನ ವಿವೇಕಾನಂದ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ನಡೆದ ಸಾಮೂಹಿಕ ಹುಟ್ಟು ಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾನುವಾರ ಮಾತನಾಡಿದರು.

ಪ್ರಸ್ತುತದ ಸ್ಪರ್ಧಾತ್ಮಕ ಜಗತ್ತಿನಲ್ಲಿ ಹಲವಾರು ಅವಕಾಶಗಳು ವಿದ್ಯಾರ್ಥಿಗಳ ಎದುರಿಗಿವೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗಿ. ಉತ್ತಮವಾದ ಭವಿಷ್ಯ ಭವಿಷ್ಯ ನಿಮ್ಮೆಲ್ಲರಿಗೂ ಇದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಫೆಬ್ರವರಿ ತಿಂಗಳಲ್ಲಿ ಹುಟ್ಟು ಹಬ್ಬವನ್ನು ಆಚರಿಸಿಕೊಂಡ ಎಲ್ಲಾ ವಿದ್ಯಾರ್ಥಿಗಳಿಗೆ ಆರತಿ ಬೆಳಗಿ, ಹೂ ನೀಡಿ, ಅಕ್ಷತೆ ಹಾಕಿ ಆಶೀರ್ವದಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ವಸತಿ ನಿಲಯಗಳ ಖಜಾಂಚಿ ಸುಬ್ಬಣ್ಣ ಶಾಸ್ತ್ರಿ ಹುಟ್ಟುಹಬ್ಬ ಆಚರಿಸಿಕೊಂಡ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವಸತಿ ನಿಲಯದ ಮುಖ್ಯನಿಲಯ ಪಾಲಕ ಗೋವಿಂದರಾಜ ಶರ್ಮಾ, ವಿದ್ಯಾ ಎ. ಎಸ್ ಅವರ ಭಾವ ದೇವರಾಜ, ವಸತಿ ನಿಲಯ ಪಾಲಕರು ಉಪಸ್ಥಿತರಿದ್ದರು. ಯಶಸ್ ವಿದ್ಯಾರ್ಥಿಗಳಾದ ರುಚಿತಾ ಹೆಗ್ಡೆ ಸ್ವಾಗತಿಸಿ, ಸಾಕ್ಷಿತಾ ವಂದಿಸಿದರು. ವಿದ್ಯಾರ್ಥಿನಿ ಮೈಥಿಲಿ ಎಸ್ ರಾವ್ ಕಾರ್ಯಕ್ರಮವನ್ನು ನಿರೂಪಿಸಿದರು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ಉಪಯುಕ್ತ ನ್ಯೂಸ್ ಸಿಗ್ನಲ್‌ ಗ್ರೂಪಿಗೆ ಜಾಯಿನ್ ಆಗಲು ಈ ಲಿಂಕ್‌ ಬಳಸಿ

Related posts

‘ನಿರ್ಮಲ ಕನಸುಗಳು’ ಕವನ ಸಂಕಲನ ಜು.3ಕ್ಕೆ ಬಿಡುಗಡೆ

Upayuktha

ಉಡುಪಿ: ಹಾಸಿಗೆಯಲ್ಲಿ ದಿನಗಳ ಕಳೆಯುತ್ತಿದ್ದ ಅಸಹಾಯಕ ಮಹಿಳೆಯ ರಕ್ಷಣೆ

Upayuktha

ವಿಟ್ಲದಲ್ಲಿ ಸಿಎಎ, ಎನ್‌ಆರ್‌ಸಿ ವಿರುದ್ಧ ಪ್ರತಿಭಟನೆ ವೇಳೆ ಸಸಿಕಾಂತ್ ಸೆಂಥಿಲ್ ಪ್ರಚೋದನಕಾರಿ ಭಾಷಣ

Upayuktha