ಅಪಘಾತ- ದುರಂತ ದೇಶ-ವಿದೇಶ

ಲೆಬನಾನ್‌ ಬಂದರು ಪ್ರದೇಶದಲ್ಲಿ ಭಾರೀ ಸ್ಫೋಟ; 10 ಮಂದಿ ಸಾವು, ನೂರಾರು ಜನರಿಗೆ ಗಾಯ

ಬೈರುತ್‌ : ಲೆಬನಾನ್ ರಾಜಧಾನಿ ಬೈರುತ್ ನಗರದ ಬಂದರು ಪ್ರದೇಶದಲ್ಲಿ ಆಗಸ್ಟ್ 4ರಂದು  ಸಂಭವಿಸಿರುವ ಭಾರೀ ಸ್ಟೋಟದಿಂದಾಗಿ ಕನಿಷ್ಠ ಹತ್ತು ಮಂದಿ ಸಾವನ್ನಪ್ಪಿದ್ದು, ನೂರಾರು ಜನ ಗಾಯಗೊಂಡಿದ್ದಾರೆ ಎಂದು ಆ ದೇಶದ ಆರೋಗ್ಯ ಸಚಿವ ಹಮದ್ ಹಸನ್ ತಿಳಿಸಿದ್ದಾರೆ.

ಕಳೆದ ಹಲವು ವರ್ಷಗಳಿಂದ ಯುದ್ಧಭೂಮಿಯಂತಾಗಿರುವ ಲೆಬನಾನ್‌ನಲ್ಲಿ ಕಳೆದ ಕೆಲ ದಿನಗಳಿಂದ ಗುಂಡಿನ ಮೊರೆತ ನಿಶ್ಯಬ್ಧತೆಯನ್ನು ತಬ್ಬಿತ್ತು. ಆದರೆ, ಇಂದು ಬೈರುತ್ ನಗರದ ಬಂದರಿನಲ್ಲಿ ಸಂಭವಿಸಿರುವ ಭಾರೀ ಸ್ಪೋಟವು ಲೆಬನಾನ್‌ನಲ್ಲಿ ಮತ್ತೆ ಆಘಾತದ ತರಂಗಗಳನ್ನು ಎಬ್ಬಿಸಿವೆ. ಈ ಸ್ಪೋಟದಲ್ಲಿ ಕನಿಷ್ಠ ಹತ್ತು ಮಂದಿ ಸತ್ತಿದ್ದು, ನೂರಾರು ಜನ ಗಾಯಗೊಂಡಿದ್ದಾರೆ. ಇದಷ್ಟೇ ಅಲ್ಲದೆ ಹಲವಾರು ಮನೆಗಳು ಹಾನಿಗೊಳಗಾಗಿವೆ ಎಂದು ವರದಿಯಾಗಿದೆ.

ಆದರೆ, ಸ್ಪೋಟದ ರುವಾರಿ ಯಾರೆಂದು ತಿಳಿದಿಲ್ಲ ಹಾಗೆಯೇ ಈ ಸ್ಪೋಟಕ್ಕೆ ಕಾರಣವೇನೆಂದು ಈವರೆಗೂ ತಿಳಿದುಬಂದಿಲ್ಲ ಎಂದು ಲೆಬನಾನ್ ಸರ್ಕಾರದ ಅಧಿಕಾರಿಗಳು ಅಂತಾರಾಷ್ಟ್ರೀಯ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಸ್ಪೋಟದ ಪರಿಣಾಮ ಬಂದರು ಪ್ರದೇಶದಲ್ಲಿದ್ದ ಗೋದಾಮುಗಳು ಕಿಟಕಿ ಗಾಜುಗಳು ಮತ್ತು ಬಾಗಿಲುಗಳು ಹಾನಿಗೊಳಗಾಗಿವೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

 

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

 

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್  App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

Related posts

ಫಾಸ್ಟ್ಯಾಗ್ ಕಡ್ಡಾಯ ಜಾರಿ ಗಡುವು ಡಿ. 15ರ ವರೆಗೆ ವಿಸ್ತರಣೆ

Upayuktha

ಬ್ರಹ್ಮಗಿರಿ ಬೆಟ್ಟದಲ್ಲಿ ಸ್ಥಗಿತಗೊಂಡ ಕಾರ್ಯಚರಣೆ

Harshitha Harish

ಯುನೆಸ್ಕೋ ಮಹಾಸಭೆ: ಅಯೋಧ್ಯೆ ತೀರ್ಪು, ಕಾಶ್ಮೀರ ವಿಚಾರದಲ್ಲಿ ಪಾಕ್ ಹಸ್ತಕ್ಷೇಪಕ್ಕೆ ಭಾರತ ತೀಕ್ಷ್ಣ ಖಂಡನೆ

Upayuktha

Leave a Comment