ನಗರ ಪ್ರಮುಖ ವ್ಯಾಪಾರ- ವ್ಯವಹಾರ ಸ್ಥಳೀಯ

ಮಂಗಳೂರು ಸೆಂಟ್ರಲ್ ಮಾರ್ಕೆಟ್ ಕೆಡವಲು ಮನಪಾ ನಿರ್ಧಾರ; ವ್ಯಾಪಾರಿಗಳು ಬೈಕಂಪಾಡಿ ಎಪಿಎಂಸಿ ಯಾರ್ಡಿಗೆ ಸ್ಥಳಾಂತರ

ಮಂಗಳೂರು: ನಗರದ ಕೇಂದ್ರ ಮಾರುಕಟ್ಟೆಯನ್ನು (ಸೆಂಟ್ರಲ್ ಮಾರ್ಕೆಟ್) ಸಂಪೂರ್ಣ ಮುಚ್ಚಲಾಗಿದ್ದು, ಪ್ರಸ್ತುತ ಕೋವಿಡ್ 19 ಸಾಂಕ್ರಾಮಿಕ ಹರಡುತ್ತಿರುವ ಸಂದರ್ಭದಲ್ಲಿ ಈಗಿರುವ ಮಾರುಕಟ್ಟೆಯ ವಿನ್ಯಾಸ ಮತ್ತು ರಚನೆ ಸೂಕ್ತವಾಗಿಲ್ಲ. ಅಲ್ಲದೆ ಅದು ದುರಸ್ತಿಗೊಳಿಸಲಾಗದಷ್ಟು ಜೀರ್ಣಾವಸ್ಥೆಗೆ ತಲುಪಿದ್ದು, ಶೀಘ್ರವೇ ಅದನ್ನು ಕೆಡವಿ ಹಾಕಿ ಹೊಸದಾಗಿ ಅತ್ಯಾಧುನಿಕ ಮಾರುಕಟ್ಟೆ ನಿರ್ಮಿಸಲಾಗುವುದು ಎಂದು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಜಿತ್ ಕುಮಾರ್ ಶಾನಾಡಿ ತಿಳಿಸಿದ್ದಾರೆ.

ಪ್ರಸ್ತುತ ಸೆಂಟ್ರಲ್ ಮಾರ್ಕೆಟ್‌ನಲ್ಲಿ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಗಳು ಬೈಕಂಪಾಡಿ ಎಪಿಎಂಸಿ ಮಾರುಕಟ್ಟೆ ಪ್ರಾಂಗಣಕ್ಕೆ ಸ್ಥಳಾಂತರಗೊಳ್ಳಲು ಒಪ್ಪಿಗೆ ಸೂಚಿಸಿದ್ದು, ಶೀಘ್ರವೇ ಈಗಿರುವ ಹಳೆ ಕಟ್ಟಡವನ್ನು ಕೆಡವಿ, ಅತ್ಯಾಧುನಿಕ ವಿನ್ಯಾಸದೊಂದಿಗೆ ಹೊಸ ಮಾರುಕಟ್ಟೆ ನಿರ್ಮಿಸಲಾಗುತ್ತದೆ ಎಂದು ಮನಪಾ ಪ್ರಕಟಣೆ ತಿಳಿಸಿದೆ.

ಬೈಕಂಪಾಡಿಯಲ್ಲಿರುವ ಎಪಿಎಂಸಿ ಮಾರುಕಟ್ಟೆ ಪ್ರಾಂಗಣಕ್ಕೆ ಸ್ಥಳಾಂತರಗೊಂಡ ವ್ಯಾಪಾರಿಗಳು

ಮಂಗಳೂರು ದಕ್ಷಿಣ ಮತ್ತು ಉತ್ತರ ವಿಧಾನಸಭಾ ಕ್ಷೇತ್ರಗಳ ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಡಾ. ವೈ ಭರತ್ ಶೆಟ್ಟಿ ಅವರ ಜತೆಗೆ ನಿನ್ನೆ ನಡೆದ ಸಭೆಯಲ್ಲಿ ವ್ಯಾಪಾರಿಗಳು ಸ್ಥಳಾಂತರಕ್ಕೆ ಒಪ್ಪಿಗೆ ಸೂಚಿಸಿದ್ದರು. ಅಲ್ಲದೆ ಎಪಿಎಂಸಿ ಯಾರ್ಡಿನಲ್ಲಿ ಶೌಚಾಲಯ, ದಾಸ್ತಾನು ಕೊಠಡಿ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸಿ ಕೊಡಬೇಕೆಂದು ಮನವಿಯನ್ನೂ ಮಾಡಿದ್ದರು. ಅದಕ್ಕೆ ಶಾಕರು ಒಪ್ಪಿಗೆ ಸೂಚಿಸಿದ್ದರು.

ಬೈಕಂಪಾಡಿಯಲ್ಲಿರುವ ಎಪಿಎಂಸಿ ಮಾರುಕಟ್ಟೆ ಪ್ರಾಂಗಣ

ಕೊರೊನಾ ಮಹಾಮಾರಿ ಹರಡುತ್ತಿರುವ ಸಂದರ್ಭದಲ್ಲಿ ಸೆಂಟ್ರಲ್ ಮಾರ್ಕೆಟ್ ಪ್ರದೇಶ ಅಗತ್ಯವಿರುವ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಕ್ತವಾಗಿಲ್ಲ ಎಂದು ಮನಪಾ ಹೇಳಿದೆ.

ಈ ಸಂಬಂಧ ಸಾರ್ವಜನಿಕ ಪ್ರಕಟಣೆಯನ್ನೂ ಮನಪಾ ಹೊರಡಿಸಿದ್ದು, ತರಕಾರಿ ಹಾಗೂ ಮೀನು ಮಾರುಕಟ್ಟೆಗಳನ್ನು ಸ್ಥಳಾಂತರಿಸಲಾಗುತ್ತಿದೆ ಎಂದು ತಿಳಿಸಿದೆ.

ಎ.ಪಿ.ಎಂ.ಸಿಯಲ್ಲಿ ವರ್ತಕರಿಗೆ ಮೂಲಸೌಕರ್ಯ ಕಲ್ಪಿಸಲು ಆದೇಶ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ ಆದೇಶದಂತೆ ಮಂಗಳೂರು ಸೆಂಟ್ರಲ್ ಮಾರ್ಕೆಟ್‍ನಲ್ಲಿ ನಡೆಯುತ್ತಿರುವ ಹಣ್ಣು ಮತ್ತು ತರಕಾರಿ ವ್ಯಾಪಾರವನ್ನು ತಕ್ಷಣದಿಂದಲೇ ಬೈಕಂಪಾಡಿ ಎಪಿಎಂಸಿ ಪ್ರಾಂಗಣಕ್ಕೆ ಸ್ಥಳಾಂತರಿಸಲಾಗಿದೆ.

ಲೈಸನ್ಸ್ ಪಡೆದ ವರ್ತಕರಿಗೆ ಎಪಿಎಂಸಿಯು ಗೋದಾಮು ವ್ಯವಸ್ಥೆ, ಹರಾಜುಕಟ್ಟೆ ವ್ಯವಸ್ಥೆ, ಕುಡಿಯುವ ನೀರು ಮತ್ತು ವ್ಯಾಪಾರ ವಹಿವಾಟಿಗೆ ಪೂರಕವಾದ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ತಾತ್ಕಾಲಿಕವಾಗಿ ಮಾಡಿಕೊಡಲು ಹಾಗೂ ಸೂಕ್ತ ಮೇಲ್ವಿಚಾರಣೆ ಮಾಡಲು ಮಂಗಳೂರು ಎಪಿಎಂಸಿಗೆ ಕೃಷಿ ಮಾರಾಟ ಇಲಾಖೆ ನಿರ್ದೇಶಕರು ಆದೇಶಿಸಿದ್ದಾರೆ.

(ಉಪಯುಕ್ತ ನ್ಯೂಸ್)

ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

Related posts

ಡಿ.29: ಪೆರ್ಲದಲ್ಲಿ ಕರ್ಹಾಡ ಸಮ್ಮಿಲನ 2019

Upayuktha

ಇಂದು ಸಾಬರ್ಮತಿ ಆಶ್ರಮಕ್ಕೆ ಪ್ರಧಾನಿ ಮೋದಿ: ಭಾರತ ‘ಬಯಲು ಶೌಚಮುಕ್ತ ದೇಶ’ ಘೋಷಣೆಗೆ ಸಿದ್ಧತೆ

Upayuktha

ಮಂಗಳೂರು: ಪರಿಸ್ಥಿತಿ ಶಾಂತ, ಕರ್ಫ್ಯೂ ಅಲ್ಪ ಸಡಿಲಿಕೆ

Upayuktha

Leave a Comment