ನಗರ ಸ್ಥಳೀಯ

ವೆನ್‌ಲಾಕ್ ಆಸ್ಪತ್ರೆಗೆ ಸಚಿವ, ಶಾಸಕದ್ವಯರ ದಿಢೀರ್ ಭೇಟಿ

ಮಂಗಳೂರು: ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿಯವರ ನೇತೃತ್ವದಲ್ಲಿ ಶಾಸಕದ್ವಯರಾದ ಡಾ. ವೈ ಭರತ್ ಶೆಟ್ಟಿ ಹಾಗೂ ವೇದವ್ಯಾಸ ಕಾಮತ್ ಅವರು ಮಂಗಳೂರಿನಲ್ಲಿರುವ ವೆನಲಾಕ್ ಸರಕಾರಿ ಜಿಲ್ಲಾಸ್ಪತ್ರೆಗೆ ದಿಢೀರ್ ಭೇಟಿ ನೀಡಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯರಿ, ಡಿಎಂಓ ಸದಾಶಿವ್ ರಾವ್, ಕೆಎಂಸಿ ಆಸ್ಪತ್ರೆಯ ವೈದ್ಯರುಗಳೊಂದಿಗೆ ಇದೇ ಸಂದರ್ಭದಲ್ಲಿ ಸಚಿವರು, ಶಾಸಕರು ತುರ್ತು ಸಭೆ ನಡೆಸಿ ರೋಗಿಗಳ ಬಳಿ ಸ್ವತ: ತೆರಳಿ ಆಸ್ಪತ್ರೆಯಲ್ಲಿ ಸಿಗುತ್ತಿರುವ ಸೌಲಭ್ಯಗಳ ಬಗ್ಗೆ ವಿಚಾರಿಸಿದರು.

ರೋಗಿಗಳಿಗೆ ಸೂಕ್ತ ಚಿಕಿತ್ಸೆ ಹಾಗೂ ಉತ್ತಮ ಸೌಕರ್ಯ ನೀಡಲು ಯೋಗ್ಯ ಕ್ರಮ ಕೈಗೊಳ್ಳುವಂತೆ ವೈದ್ಯಾಧಿಕಾರಿಗಳಿಗೆ ಸೂಚಿಸಲಾಯಿತು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ಉಪಯುಕ್ತ ನ್ಯೂಸ್ ಸಿಗ್ನಲ್‌ ಗ್ರೂಪಿಗೆ ಜಾಯಿನ್ ಆಗಲು ಈ ಲಿಂಕ್‌ ಬಳಸಿ

Related posts

ದ.ಕ., ಉಡುಪಿ ಕೊರೊನಾ ಪಾಸಿಟಿವ್ ಇಲ್ಲ, ಕಾಸರಗೋಡಿನಲ್ಲಿ ಎರಡು ಕೇಸ್

Upayuktha

‘ಉತ್ತಮ ಆರೋಗ್ಯಕ್ಕೆ ಸಮತೋಲಿತ ಆಹಾರ ಮುಖ್ಯ’

Upayuktha

ಜ16:ರಂದು ವಿವೇಕಾನಂದ ಕಾಲೇಜಿನಲ್ಲಿ ರಾಜ್ಯ ಮಟ್ಟದ ಐಟಿ-ಫೆಸ್ಟ್ ‘ಟೆಕ್ನೋತರಂಗ್ 2020’

Upayuktha