ರಾಜ್ಯ

ಸಚಿವ ಜೆಸಿ ಮಾಧುಸ್ವಾಮಿ ಕೊರೊನಾ ಪಾಸಿಟಿವ್; ಆರೋಗ್ಯ ಸಚಿವ ಟ್ವೀಟ್

ಬೆಂಗಳೂರು: ಕಾನೂನು ಮತ್ತು ಸಂಸದೀಯ ಸಚಿವ ಜೆಸಿ ಮಾಧುಸ್ವಾಮಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಸಚಿವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶನಿವಾರ ಸಚಿವರು ಕೊರೋನಾ ಟೆಸ್ಟ್ ಮಾಡಿಸಿಕೊಂಡಿದ್ದು ವರದಿ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಬೆಂಗಳೂರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಆರೋಗ್ಯ ಸಚಿವ
ಬಿ. ಶ್ರೀರಾಮುಲು

ರಾಜ್ಯದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಹಾಗೂ ಆತ್ಮೀಯರೂ ಆದ ಜೆ.ಸಿ. ಮಾಧುಸ್ವಾಮಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ

“ಮಾಧುಸ್ವಾಮಿ ಅವರು ಶೀಘ್ರ ಗುಣಮುಖರಾಗಿ ತಮ್ಮ ಸಾರ್ವಜನಿಕ ಸೇವೆಗೆ ಮರಳಲಿ ಎಂದು ಹಾರೈಸುತ್ತೇನೆ.” ಎಂದಿದ್ದಾರೆ.

Related posts

ಕೊರೊನಾ ವಿಪತ್ತು: ಗೋಶಾಲೆಗಳಿಗೆ 200 ಕೋಟಿ ರೂ ಪ್ಯಾಕೇಜ್ ನೀಡಲು ಒತ್ತಾಯ

Upayuktha

ಸಂಪುಟ ವಿಸ್ತರಣೆ ಬಗ್ಗೆ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ

Harshitha Harish

ಎಡನೀರು ಶ್ರೀ ಮಠದ ಉತ್ತರಾಧಿಕಾರಿಯಾಗಿ ಶ್ರೀಶ್ರೀಶ್ರೀ ಸಚ್ಚಿದಾನಂದ ಭಾರತೀ ನಿಯುಕ್ತಿ

Upayuktha