ಪ್ರಚಲಿತ ವಿದ್ಯಮಾನಗಳು ಪ್ರಮುಖ ರಾಜ್ಯ

ಸಾಹುಕಾರನ ಸಿಡಿ ಪ್ರಕರಣ: ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ಜಾರಕಿಹೊಳಿ ರಾಜೀನಾಮೆ

ಬೆಂಗಳೂರು: ನಿನ್ನೆ ಸಿಡಿ ಬಹಿರಂಗಗೊಂಡ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

ಸಿಡಿ ಬಹಿರಂಗದ ನಂತರ ಮಾಧ್ಯಮಗಳಿಂದ ದೂರು ಉಳಿದು ತಡರಾತ್ರಿ ವಿಡಿಯೋ ನಕಲಿ ಸ್ಪಷ್ಟೀಕರಣ ಎಂದಿದ್ದ ಸಚಿವ ರಮೇಶ್ ಜಾರಕಿಹೊಳಿ ಇಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ಬೆಳೆಗ್ಗೆಯಿಂದಲೂ ಸಿಡಿ ವಿಚಾರವಾಗಿ ಹೈಕಮಾಂಡ್ ಮಟ್ಟದಲ್ಲಿ ಸಭೆ ನಡೆದ ನಂತರ ರಾಜೀನಾಮೆ ಸಲ್ಲಿಸಿದ್ದಾರೆ.

ಬಾಲಚಂದ್ರ ಜಾರಕಿಹೊಳಿ ಮೂಲಕ ರಾಜೀನಾಮೆ ಪತ್ರವನ್ನು ಸಿಎಂ ಯಡಿಯೂರಪ್ಪ ಅವರಿಗೆ ಸಲ್ಲಿಕೆ ಮಾಡಿದ್ದು, ಪಕ್ಷ ಹಾಗೂ ಸರ್ಕಾರಕ್ಕೆ ಮುಜುಗರವಾಗಬಾರದು ಎನ್ನುವ ಕಾರಣಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಆರೋಪ ನಿರಾಧಾರ ಎಂದು ಸಾಬೀತಾದ ನಂತರ ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎನ್ನುವ ಷರತ್ತಿನೊಂದಿಗೆ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Related posts

ನಿಮ್ಮ ದೇಹ ಪ್ರಕೃತಿಗೆ ಯಾವ ಆಹಾರ ಸೂಕ್ತ…? ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೇಲ್ಸ್

Upayuktha

ವಿಶ್ವ ರೇಬಿಸ್ ದಿನ 2019: ಚಿಕಿತ್ಸೆಯಿಲ್ಲದ ರೋಗಕ್ಕೆ ಮುಂಜಾಗ್ರತೆಯೇ ಮದ್ದು

Upayuktha

ಫೆ.2ರಂದು ಕ್ಲೀನ್‌-ಗ್ರೀನ್‌-ಫಿಟ್ ಮಂಗಳೂರಿಗಾಗಿ ಸಹ್ಯಾದ್ರಿ 10ಕೆ ರನ್‌

Upayuktha