ನಗರ ಸ್ಥಳೀಯ

ಮಂಗಳೂರು ಉತ್ತರ ಭಾಜಪಾ ಮಂಡಲ ಪ್ರಶಿಕ್ಷಣ ವರ್ಗ: ಶಾಸಕ ಡಾ.ಭರತ್ ಶೆಟ್ಟಿ ಉದ್ಘಾಟನೆ

ಮಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಜಿಯವರ ಭಾಜಪಾ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ಬಳಿಕ ದೇಶದಲ್ಲಿ ಹಲವು ಸುಧಾರಣೆಗಳು ಆಗಿವೆ. ಈಗಿನ ತಲೆಮಾರಿಗೆ ಉಪಯೋಗವಿಲ್ಲದ ಅನೇಕ ಕಾಯಿದೆಗಳಿಗೆ ತಿದ್ದುಪಡಿ ಅಥವಾ ಬದಲಾವಣೆ ಮಾಡುವ ಅಗತ್ಯವನ್ನು ಕೇಂದ್ರ ಸರಕಾರ ಮನಗಂಡಿದೆ. ಅದೆಲ್ಲದರ ಬಗ್ಗೆ ಮಾಹಿತಿ ತಿಳಿಯುವ ಕಾರ್ಯ ಈ ಮಂಡಲ ಪ್ರಶಿಕ್ಷಣದಲ್ಲಿ ನಡೆಯಲಿದೆ ಎಂದು ಶಾಸಕರಾದ ಡಾ.ಭರತ್ ಶೆಟ್ಟಿ ಹೇಳಿದರು.

ಭಾರತೀಯ ಜನತಾ ಪಾರ್ಟಿಯ ಮಂಗಳೂರು ನಗರ ಉತ್ತರದ ವತಿಯಿಂದ ಆಯೋಜಿಸಲಾದ ಎರಡು ದಿನಗಳ ಮಂಡಲ ಪ್ರಶಿಕ್ಷಣ ವರ್ಗವನ್ನು ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಹರ್ಷಿತಾ ಸಭಾಂಗಣದಲ್ಲಿ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಗುರುವಾರ ಉದ್ಘಾಟಿಸಿದರು.

ಶಾಸಕರ ಜೊತೆಗೆ ಉದ್ಘಾಟನಾ ಅವಧಿಯ ಅಧ್ಯಕ್ಷರಾದ ತಿಲಕ್ ರಾಜ್ ಕೃಷ್ಣಾಪುರ, ಮಂಡಲ ಅಧ್ಯಕ್ಷರು, ರಾಜೇಶ್ ಕಾವೇರಿ, ಜಿಲ್ಲಾ ಸಹ ಪ್ರಭಾರಿ, ಸುಧಾಕರ್ ಆಚಾರ್ಯ, ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಠ ಸಹ ಸಂಚಾಲಕರು, ರಾಜೇಶ್ ಶೆಟ್ಟಿ ಸಲ್ಲಾಜೆ , ಮಂಗಳೂರು ನಗರ ಉತ್ತರ ಮಂಡಲದ ಪ್ರಶಿಕ್ಷಣ ಪ್ರಕೋಷ್ಠದ ಸಂಚಾಲಕರು, ಹಾಗೂ ಮಂಡಲ ಪ್ರಶಿಕ್ಷಣದ ಎಲ್ಲ ಅಪೇಕ್ಷಿತ ಶಿಬಿರಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

 

Related posts

ಉಡುಪಿ: ಕೃಷ್ಣಾಪುರ ಮಠದ ಪರ್ಯಾಯಕ್ಕೆ ಬಾಳೆ ಮುಹೂರ್ತ

Upayuktha

ಸೋಮವಾರಪೇಟೆ: ಬೆಳ್ಳಂಬೆಳಗ್ಗೆ ಕಾಡಾನೆಗಳ ಹೆದ್ದಾರಿ ವಾಕಿಂಗ್, ಗ್ರಾಮಸ್ಥರಿಗೆ ಭೀತಿ

Upayuktha

ದ.ಕ ಜಿಲ್ಲಾ ಗೃಹರಕ್ಷಕರ ಜಿಲ್ಲಾ ಮಟ್ಟದ ಕ್ರೀಡಾಕೂಟ

Upayuktha