ಉಡುಪಿ: ರಾಜ್ಯ ವಿಧಾನಪರಿಷತ್ತಿಗೆ ನಾಮನಿರ್ದೇಶನಗೊಂಡ ಸಿದ್ದಿ ಸಮುದಾಯದ ಮೊದಲ ಪ್ರತಿನಿಧಿಯೆಂಬ ಹೆಗ್ಗಳಿಕೆಗೆ ಪಾತ್ರರಾದ ಶಾಂತಾರಾಮ ಸಿದ್ದಿಯವರು ಗುರುವಾರ ನೀಲಾವರ ಗೋಶಾಲೆಯಲ್ಲಿ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಆರ್ ಎಸ್ ಎಸ್ ನ ವನವಾಸಿ ಕಲ್ಯಾಣ ವಿಭಾಗದ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಶ್ರೀಪಾದ ಹೆಗಡೆ, ಮುಖಂಡರಾದ ಗೋಪಾಲ್ ಕೇಸರಿ ಉಪಸ್ಥಿತರಿದ್ದರು.
ಬಳಿಕ ಕುಂಭಾಸಿ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಶಾಂತಾರಾಮ ಸಿದ್ಧಿಯವರಿಗೆ ವಿಶೇಷ ಗೌರವ ಪ್ರಸಾದ ನೀಡಲಾಯಿತು.
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಟ್ವಿಟರ್ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ
ಯೂಟ್ಯೂಬ್ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್ App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.