ಕಬಕ: ಪುತ್ತೂರು ತಾಲೂಕಿನ ಕಬಕ ಗ್ರಾಮ ಪಂಚಾಯತ್ ನಲ್ಲಿ ಜ. 20ರಂದು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಜನವರಿ 15 ರಿಂದ ಮಾರ್ಚ್ 15 ರ ತನಕ ನಡೆಯುತ್ತಿರುವ “ಮಹಿಳಾ ಕಾಯಕೋತ್ಸವ”ವನ್ನು ಪುತ್ತೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ನವೀನ್ ಭಂಡಾರಿ ಉದ್ಘಾಟಿಸಿದರು.
ಈ ಸಂದರ್ಭದ ತಾಲೂಕು ಪಂಚಾಯತ್ ನ ಸಹಾಯಕ ನಿರ್ದೇಶಕರಾದ (ಗ್ರಾ.ಉ) ಶೈಲಜಾ ಭಟ್, ತಾಲೂಕು ಐಇಸಿ ಸಂಯೋಜಕ ಭರತ್ ರಾಜ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆಶಾ, ಕಾರ್ಯದರ್ಶಿ, ಎನ್ಆರ್ಎಲ್ಎಮ್ ಒಕ್ಕೂಟದ ಸದಸ್ಯೆಯರು, ಪಂಚಾಯತ್ ಸಿಬ್ಬಂದಿಗಳು, ಗ್ರಾಮಸ್ಥರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಬಳಿಕ ಮನೆ ಮನೆ ಭೇಟಿ ನೀಡುವ ಮೂಲಕ ಸಮೀಕ್ಷೆಯನ್ನು ನಡೆಸಲಾಯಿತು.
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ