ಮೂಡುಬಿದಿರೆ: ಒಂಟಿಕಟ್ಟೆಯ ಕಡಲಕೆರೆ ನಿಸರ್ಗಧಾಮದ ಕೋಟಿ-ಚೆನ್ನಯ ಜೋಡುಕರೆಯಲ್ಲಿ ಫೆ.20ರಂದು ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿ ವತಿಯಿಂದ 18ನೇ ವರ್ಷದ ಹೊನಲು ಬೆಳಕಿನ ಕಂಬಳೋತ್ಸವನ್ನು ಆಯೋಜಿಸಲಾಗಿದೆ.
ಈ ಕುರಿತು ಮಾಧ್ಯಮ ಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡ ಶಾಸಕ, ಕಂಬಳ ಸಮಿತಿಯ ಅಧ್ಯಕ್ಷ ಉಮಾನಾಥ ಕೋಟ್ಯಾನ್, ಚೌಟರ ಅರಮನೆಯ ಕುಲದೀಪ್ ಎಂ. ಅವರ ಅಧ್ಯಕ್ಷತೆಯಲ್ಲಿ ಆಲಂಗಾರು ಬಡಗು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ವೇ.ಮೂ. ಈಶ್ವರ ಭಟ್, ಆಲಂಗಾರು ಚರ್ಚಿನ ಧರ್ಮಗುರು ವಾಲ್ಟರ್ ಡಿಸೋಜ, ಪುತ್ತಿಗೆ ನೂರಾನಿ ಮಸ್ಜೀದ್ನ ಮೌಲಾನ ಝಿಯಾವುಲ್ಲ ಹಾಗೂ ಸುಧೀರ್ ಹೆಗ್ಡೆ ಕುಂಟಾಡಿ ಈ ಬಾರಿಯ ಕಂಬಳೋತ್ಸವನ್ನು ಉದ್ಘಾಟಿಸಲಿದ್ದು, ಬೆಳಗ್ಗೆ 7 ಗಂಟೆಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ.
ಸಂಜೆ ಹಮ್ಮಿಕೊಳ್ಳಲಾಗಿರುವ ಸಭಾ ಕಾರ್ಯಕ್ರಮಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಇತರೆ ಸಚಿವರು ಆಗಮಿಸಲಿದ್ದು, ಈ ಬಾರಿಯ ಕಂಬಳದಲ್ಲಿ 175ಕ್ಕಿಂತ 200 ಜತೆ ಕೋಣಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದರು
ಈ ಸಂದರ್ಭದಲ್ಲಿ ಸಮಿತಿಯ ಕೋಶಾಧಿಕಾರಿ ಭಾಸ್ಕರ್ ಕೋಟ್ಯಾನ್, ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್, ವಾರ್ಡ್ ಸದಸ್ಯ ನಾಗರಾಜ ಪೂಜಾರಿ, ಜಿ.ಪಂ ಸದಸ್ಯ ಕೆ.ಪಿ.ಸುಚರಿತ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ, ಜಿಲ್ಲಾ ಉಪಾಧ್ಯಕ್ಷ ಈಶ್ವರ ಕಟೀಲ್, ಮಂಡಲ ಅಧ್ಯಕ್ಷ ಸುನೀಲ್ ಆಳ್ವ, ನ್ಯಾಯವಾದಿ ಸುರೇಶ್ ಕೆ.ಪೂಜಾರಿ, ಮೂಡಾ ಅಧ್ಯಕ್ಷ ಮೇಘನಾಥ ಶೆಟ್ಟಿ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ಉಪಯುಕ್ತ ನ್ಯೂಸ್ ಸಿಗ್ನಲ್ ಗ್ರೂಪಿಗೆ ಜಾಯಿನ್ ಆಗಲು ಈ ಲಿಂಕ್ ಬಳಸಿ