ಜಿಲ್ಲಾ ಸುದ್ದಿಗಳು

ಕೋವಿಡ್ ನಿಯಮವನ್ನು ಕಡ್ಡಾಯವಾಗಿ ಪಾಲಿಸಿ: ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯರಿ

ಮಂಗಳೂರು: ಕೊರೋನಾ ಎರಡನೇ ಅಲೆಯ ಮುನ್ಸೂಚನೆ ಎಂಬಂತೆ ಮಾರ್ಚ್ ಮೊದಲ ವಾರದಿಂದ ದ.ಕ ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳಲ್ಲಿ ಏರಿಕೆ ಕಂಡು ಬಂದಿದೆ. ಶೇ.1ಕ್ಕಿಂತಲೂ ಕಡಿಮೆಯಾಗಿದ್ದ ಕೋವಿಡ್ ಪಾಸಿಟಿವಿಟಿ ಪ್ರಮಾಣ ಇದೀಗ ಶೇ.1.81ಕ್ಕೆ ಏರಿಕೆಯಾಗಿದೆ. ಈ ಹಿನ್ನಲೆಯಲ್ಲಿ ಕೋವಿಡ್ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯರಿ ತಿಳಿಸಿದ್ದಾರೆ.

ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮಂಗಳೂರು ಪತ್ರಿಕಾಭವನದಲ್ಲಿ ಮಂಗಳವಾರ ಆಯೋಜಿಸಲಾದ ಪತ್ರಿಕಾ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಹೆಚ್ಚಿನ ಪ್ರಕರಣಗಳು ವಿದ್ಯಾಾರ್ಥಿಗಳಲ್ಲಿ ದಾಖಲಾಗುತ್ತಿದೆ. ಕೊರೋನಾವನ್ನು ಲಘುವಾಗಿ ತೆಗೆದುಕೊಳ್ಳುತ್ತಿರುವುದೇ ಇದಕ್ಕೆ ಕಾರಣ. ದೇಶದ ವಿವಿಧ ರಾಜ್ಯಗಳಿಂದ ಮಂಗಳೂರಿಗೆ ಬರುತ್ತಿದ್ದು, ಅದರಲ್ಲೂ ಕೇರಳದಿಂದ ಬರುವವರಲ್ಲಿ ಪ್ರಕರಣ ಹೆಚ್ಚಾಾಗಿದೆ. ಈಗಾಗಲೇ ಹಲವು ಶಿಕ್ಷಣ ಸಂಸ್ಥೆಗಳನ್ನು ಸೀಲ್‌ಡೌನ್ ಮಾಡಲಾಗಿದೆ. ಜೊತೆಗೆ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಮಿತಿಮೀರಿದ್ದು, ಸಾಮಾಜಿಕ ಅಂತರ, ಮಾಸ್ಕ್, ಸ್ವಚ್ಛತೆಗಳನ್ನು ಜನರು ಮರೆತಂತಿದೆ. ಎರಡನೇ ಅಲೆ ತಡೆಯುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

45 ವರ್ಷಕ್ಕಿಂತ ಮೇಲ್ಪಟ್ಟವರು ಲಸಿಕೆ ಪಡೆಯುವುದು ಕಡ್ಡಾಯ. ಅದರಿಂದ ಯಾವುದೇ ಅಪಾಯವಿಲ್ಲ, ಮುಖ್ಯವಾಗಿ ಕಾಯಿಲೆ ಬಂದರೂ ಸಾವನ್ನು ತಪ್ಪಿಸಬಹುದಾಗಿದೆ. ಆದ್ದರಿಂದ ಒಂದು ಡೋಸ್ ಆದರೂ ಪಡೆಯಲೇ ಬೇಕು. ಯಾರಿಗಾರೂ ಪಾಸಿಟಿವ್ ಬಂದರೆ ಸುತ್ತಮುತ್ತಲಿನ ಎಲ್ಲರೂ ಲಸಿಕೆ ತೆಗೆದುಕೊಳ್ಳಬೇಕು. ಸಾವಿನ ಪ್ರಮಾಣ ಕಡಿಮೆ ಮಾಡುವುದೇ ಇದರ ಮುಖ್ಯ ಉದ್ದೇಶ ಎಂದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿದರು. ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಆತ್ಮಭೂಷಣ್ ಕಾರ್ಯಕ್ರಮ ನಿರೂಪಿಸಿದರು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Related posts

ಯಕ್ಷಾಂಗಣದಿಂದ 8ನೇ ವರ್ಷದ ನುಡಿಹಬ್ಬ

Upayuktha

ಮಂಗಳೂರಿನಲ್ಲಿ ಲಾರಿಯೊಂದು ಬೈಕ್ ಗೆ ಡಿಕ್ಕಿ; ನವದಂಪತಿಗಳು ಸಾವು

Harshitha Harish

ಮುಳಿಯ ಜ್ಯುವೆಲ್ಸ್‌: ಪುತ್ತೂರು, ಬೆಳ್ತಂಗಡಿ ಮಳಿಗೆಗಳಲ್ಲಿ ‘ಮುಳಿಯ ಚಿನ್ನೋತ್ಸವ’ಕ್ಕೆ ಚಾಲನೆ

Upayuktha