ಪ್ರಮುಖ ರಾಜ್ಯ

ಆ.27ಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಪದಗ್ರಹಣ

ಬೆಂಗಳೂರು: ಬಿಜೆಪಿ ನೂತನ ರಾಜ್ಯಾಧ್ಯಕ್ಷರ ನಳಿನ್ ಕುಮಾರ್ ಕಟೀಲ್ ಅವರ ಪದಗ್ರಹಣ ಸಮಾರಂಭ ಆಗಸ್ಟ್ 27ರ ಮಂಗಳವಾರ ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.

ಪೂರ್ವನಿಗದಿಯಂತೆ ಇಂದು (ಭಾನುವಾರ) ನಡೆಯಬೇಕಿದ್ದ ರಾಜ್ಯಾಧ್ಯಕ್ಷರ ಪದಗ್ರಹಣ ಸಮಾರಂಭವನ್ನುಕೇಂದ್ರದ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ನಿಧನದ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು.

ನಳಿನ್ ಕುಮಾರ್ ಕಟೀಲ್ ಅವರನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಆ.20ರ ಮಂಗಳವಾರದಂದು ಕರ್ನಾಟಕ ಬಿಜೆಪಿ ಅಧ್ಯಕ್ಷರಾಗಿ ನೇಮಿಸಿ ಆದೇಶ ಹೊರಡಿಸಿದ್ದರು.

2019ರ ಲೋಕಸಭಾ ಚುನಾವಣೆಯಲ್ಲಿ ನಳಿನ್ ಕುಮಾರ್ ಕಟೀಲ್‌ ಅವರು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ಸಂಸದರಾಗಿ ಆಯ್ಕೆಯಾಗಿದ್ದರು.

Related posts

ಯಕ್ಷಗಾನ ಅಕಾಡೆಮಿ ಬಹುಮಾನ: ಲೇಖಕರು, ಪ್ರಕಾಶಕರಿಂದ ಅರ್ಜಿ ಆಹ್ವಾನ

Upayuktha

ಚೀನಾಗೆ 13,000 ಕೋಟಿ ಪೌಂಡ್‌ಗಳ ‘ಕೊರೊನಾ ಬಿಲ್’ ಕಳುಹಿಸಿದ ಜರ್ಮನಿ

Upayuktha

ಇಸ್ರೋದಿಂದ ಮತ್ತೊಂದು ಮೈಲುಗಲ್ಲು: ಬೇಹುಗಾರಿಕಾ ಉಪಗ್ರಹ ರಿಸ್ಯಾಟ್-2ಬಿಆರ್‌1 ಯಶಸ್ವಿ ಉಡ್ಡಯನ

Upayuktha