ಪುಂಜಾಲಕಟ್ಟೆ: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಐಸಿಎಕ್ಯೂ ಘಟಕ, ರಾಷ್ಟ್ರೀಯ ಸೇವಾ ಯೋಜನೆ ಘಟಕ 1&2 ಹಾಗೂ ರಾಜ್ಯಶಾಸ್ತ್ರ ವಿಭಾಗ ಇದರ ಆಶ್ರಯದಲ್ಲಿ “ರಾಷ್ಟ್ರೀಯ ಮತದಾರರ ದಿನ ಆಚರಣೆಯ ಅಂಗವಾಗಿ ಮತದಾರರ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರದಲ್ಲಿ ರಾಜ್ಯಶಾಸ್ತ್ರದ ಉಪನ್ಯಾಸಕರಾದ ಪ್ರೊ| ಶೇಖರ್ ‘ಮತದಾರರ ಪ್ರತಿಜ್ಞಾ ವಿಧಿ’ಯನ್ನು ಬೋಧಿಸಿದರು. ವಾಣಿಜ್ಯ, ವ್ಯವಹಾರ ಹಾಗೂ ಕಲಾ ವಿಭಾಗದ ಅಧ್ಯಾಪಕ ವೃಂದದವರು ಹಾಗೂ ICAQ ಘಟಕದ ಸಂಚಾಲಕರು, ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಗಣಪತಿ ಭಟ್ ಕುಳಮರ್ವ ಇವರು ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದರು.
ಈ ಕಾರ್ಯಕ್ರಮವು ಅಂತಿಮ ಕಲಾ ವಿಭಾಗದ ವಿಧ್ಯಾರ್ಥಿನಿ ರಂಜಿತಾ ಇವರ ನಿರೂಪಣೆಯಲ್ಲಿ, ರಮ್ಯ ಇವರು ಎಲ್ಲರನ್ನೂ ಕಾರ್ಯಕ್ರಮಕ್ಕೆ ಸ್ವಾಗತಿಸಿ, ಕಾರ್ಯಕ್ರಮದ ಕೊನೆಯಲ್ಲಿ ರಶ್ಮಿ ಎಲ್ಲರಿಗೂ ವಂದಿಸಿದರು. ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ಹಾಗೂ ಅಂತಿಮ ಕಲಾ ವಿಭಾಗದ ವಿದ್ಯಾರ್ಥಿಗಳು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ಉಪಯುಕ್ತ ನ್ಯೂಸ್ ಸಿಗ್ನಲ್ ಗ್ರೂಪಿಗೆ ಜಾಯಿನ್ ಆಗಲು ಈ ಲಿಂಕ್ ಬಳಸಿ