ಕ್ಯಾಂಪಸ್ ಸುದ್ದಿ ಗ್ರಾಮಾಂತರ ಸ್ಥಳೀಯ

ವಿವಿಧ ಕೌಶಲ್ಯಗಳನ್ನು ಬೆಳೆಸಿಕೊಂಡು ಉದ್ಯೋಗಾವಕಾಶ ಬಾಚಿಕೊಳ್ಳಿ: ಡಾ.ಗೋಪಾಲಕೃಷ್ಣ ಜೋಶಿ

ನಿಟ್ಟೆ: “ಇಂಜಿನಿಯರ್‌ಗಳು ತಮ್ಮ ಜ್ಞಾನದಿಂದ ಸಮಾಜದ ವಿವಿಧ ಸಂಕೀರ್ಣತೆಗಳನ್ನು ಪರಿಹರಿಸುವಲ್ಲಿ ಶ್ರಮಿಸಬೇಕು. ವಿದ್ಯಾರ್ಥಿಗಳು ವಿವಿಧ ಬಗೆಯ ಕೌಶಲ್ಯಗಳನ್ನು ಬೆಳೆಸಿಕೊಂಡು ಉತ್ತಮ ಉದ್ಯೋಗಾವಕಾಶಗಳನ್ನು ಬಾಚಿಗೊಳ್ಳಬೇಕು” ಎಂದು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ವಿಭಾಗದ ಎಕ್ಸಿಕ್ಯೂಟಿವ್ ಡೈರೆಕ್ಟರ್ ಡಾ.ಗೋಪಾಲಕೃಷ್ಣ ಜೋಶಿ ಅಭಿಪ್ರಾಯಪಟ್ಟರು.

ಅವರು ಏ.3ರಂದು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. “ತಂತ್ರಜ್ಞಾನದ ಬಳಕೆಯಿಂದ ವಿವಿಧ ಕ್ಷೇತ್ರಗಳಲ್ಲಿ ನಿರುದ್ಯೋಗ ಸಮಸ್ಯೆ ಎದುರಾಗಿದೆ, ಇದರೊಂದಿಗೆ ಹಲವಾರು ವಿನೂತನ ಬಗೆಯ ಉದ್ಯೋಗಾವಕಾಶಗಳೂ ಹುಟ್ಟಿಕೊಂಡಿದೆ. ಪುಟ್ಟ ಅವಕಾಶವನ್ನೂ ಸದುಪಯೋಗಪಡಿಸಿಕೊಂಡು ಉನ್ನತ ಮಟ್ಟಕ್ಕೆ ಬೆಳೆಯಬೇಕು” ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಈ ಸಂಸ್ಥೆಯ ಹಳೆ ವಿದ್ಯಾರ್ಥಿ, ಉದ್ಯಮಿ ಎನ್. ಸಂಜಿತ್ ಶೆಟ್ಟಿ ಪ್ರಾಯೋಜಿತ ಪ್ರಶಸ್ತಿಯನ್ನು ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಕಾಲೇಜಿನ ವಾರ್ಷಿಕೋತ್ಸವದ ಅಂಗವಾಗಿ ಶೈಕ್ಷಣಿಕ ಹಾಗೂ ಕ್ರೀಡಾ ವಿಭಾಗಗಳಲ್ಲಿ ಉನ್ನತ ಸಾಧನೆಗೈದವರಿಗೆ ಬಹುಮಾನ ವಿತರಿಸಲಾಯಿತು.

ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ನಿರಂಜನ್ ಎನ್. ಚಿಪ್ಳೂಣ್‍ಕರ್ ಸ್ವಾಗತಿಸಿ ಕಾಲೇಜಿನ ವಾರ್ಷಿಕ ವರದಿಯನ್ನು ವಾಚಿಸಿದರು. ಉಪಪ್ರಾಂಶುಪಾಲ ಡಾ.ಐ.ಆರ್ ಮಿತ್ತಂತಾಯ ವಿದ್ಯಾರ್ಥಿ ಸಾಧಕರ ಪಟ್ಟಿಯನ್ನು ವಾಚಿಸಿದರು ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಗಣೇಶ್ ಪೂಜಾರಿ ಕ್ರೀಡಾ ವಿಭಾಗದ ಸಾಧಕರ ಪಟ್ಟಿಯನ್ನು ವಾಚಿಸಿದರು.

ಪ್ಲೇಸ್ಮೆಂಟ್, ಟ್ರೈನಿಂಗ್ ಮತ್ತು ಕೌನ್ಸೆಲಿಂಗ್ ವಿಭಾಗದ ಮುಖ್ಯಸ್ಥೆ ಪ್ರೊ.ಶಾಲಿನಿ ಕೆ ಶರ್ಮ ಎನ್. ಸಂಜಿತ್ ಶೆಟ್ಟಿ ಪ್ರಾಯೋಜಿತ ಪ್ರಶಸ್ತಿ ವಿಜೇತರ ಪಟ್ಟಿಯನ್ನು ವಾಚಿಸಿದರು. ಕಾರ್ಯಕ್ರಮ ಸಂಯೋಜಕ ಡಾ.ಸುಬ್ರಹ್ಮಣ್ಯ ಭಟ್, ಡೀನ್-ಸ್ಟೂಡೆಂಟ್ ವೆಲ್ಫೇರ್ ವಂದಿಸಿದರು. ವಿದ್ಯಾರ್ಥಿಗಳಾದ ತೇಜಸ್ ಬಾಳಿಗ ಹಾಗೂ ಸಹನಾ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Related posts

ಭಾರತ ಔಷಧ ಪದ್ಧತಿಯ ರಾಷ್ಟ್ರೀಯ ಆಯೋಗಕ್ಕೆ ನ್ಯಾಚುರೋಪಥಿ, ಯೋಗ ಸೇರ್ಪಡೆ ಆಗ್ರಹಿಸಿ ಪ್ರತಿಭಟನೆ

Upayuktha

ರೋಟರಿ ವತಿಯಿಂದ ‘ವೃತ್ತಿಪರ ಶ್ರೇಷ್ಠತೆ ಪ್ರಶಸ್ತಿ 2020’ ಪ್ರದಾನ

Upayuktha

ನಾಳೆ ಮಂದಾರಬಯಲಿನಲ್ಲಿ ಎಡನೀರು ಸಂಸ್ಥಾನದ ನೂತನ ಶ್ರೀಗಳಿಗೆ ಗೌರವಾರ್ಪಣೆ

Upayuktha