ನಗರ ಪ್ರಮುಖ ಸ್ಥಳೀಯ

ದ.ಕ, ಉಡುಪಿ ಜಿಲ್ಲೆಗಳಲ್ಲಿ ಇಂದು ಕೊರೊನಾ ಪಾಸಿಟಿವ್ ಇಲ್ಲ; ಕಾಸರಗೋಡಿನಲ್ಲಿ 9 ಪಾಸಿಟಿವ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಯಾವುದೇ ಕೊರೊನಾ ಸೋಂಕು ಪ್ರಕರಣ ವರದಿಯಾಗಿಲ್ಲ.

ಸೋಮವಾರ ಒಟ್ಟು 21 ಮಂದಿಯ ಪರೀಕ್ಷೆ ವರದಿ ಜಿಲ್ಲಾಡಳಿತದ ಕೈ ಸೇರಿದ್ದು, ಎಲ್ಲ ವರದಿಯೂ ನೆಗೆಟಿವ್ ಆಗಿದೆ. ಒಟ್ಟಾರೆ ಜಿಲ್ಲೆಯಲ್ಲಿ ಇದುವರೆಗೆ 12 ಪ್ರಕರಣ ಪತ್ತೆಯಾಗಿದ್ದು, ಇವರಲ್ಲಿ ನಾಲ್ವರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 10 ತಿಂಗಳ ಮಗು ಸೇರಿದಂತೆ ಉಳಿದ 8 ಮಂದಿಗೆ ಚಿಕಿತ್ಸೆ ಮುಂದುವರಿದಿದ್ದು, ಎಲ್ಲರೂ ಚೇತರಿಕೆಯಲ್ಲಿದ್ದಾರೆ.

ಇನ್ನು ಉಡುಪಿ ಜಿಲ್ಲೆಯಲ್ಲಿ ಸೋಮವಾರ ಯಾವುದೇ ಕೊರೊನಾ ಸೋಂಕು ಪ್ರಕರಣ ವರದಿಯಾಗಿಲ್ಲ. ಉಡುಪಿ ಜಿಲ್ಲೆಯಲ್ಲಿ ಇದುವರೆಗೆ ಕನಿಷ್ಠ ಅಂದರೆ ಕೇವಲ 3 ಪ್ರಕರಣ ಮಾತ್ರ ಪತ್ತೆಯಾಗಿದೆ.

ಕಾಸರಗೋಡಿನಲ್ಲಿ ಮತ್ತೆ 9 ಪ್ರಕರಣ ಕೊರೊನಾ ಸೋಂಕು ಪ್ರಕರಣ ಉಲ್ಭಣಿಸಿರುವ ನೆರೆಯ ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ ಮತ್ತೆ 9 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 151ಕ್ಕೆ ಏರಿಕೆಯಾಗಿದೆ. ಸೋಮವಾರ ಸೋಂಕು ಪತ್ತೆಯಾದ 9 ಮಂದಿಯಲ್ಲಿ ಆರು ಮಂದಿ ಗಲ್ಫ್ ನಿಂದ ಬಂದವರು.

(ಉಪಯುಕ್ತ ನ್ಯೂಸ್)

ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

Related posts

ಮಂಗಳೂರು ತಾಲೂಕು ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಡಾ. ಮಾಲತಿ ಶೆಟ್ಟಿ ಮಾಣೂರು ನೇಮಕ

Upayuktha

ದುಡಿ ಇದ್ದರೂ ದುಡ್ಡಿಲ್ಲ: ‘ಪ್ರತಿಭಾನ್ವಿತರೊಂದಿಗೆ ಪೆರಡಾಲ ಶಾಲೆ’ ಕಾರ್ಯಕ್ರಮದಲ್ಲಿ ಆನಂದ ಬಾರಡ್ಕ

Upayuktha

ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದಲ್ಲಿ ವಿಜ್ಞಾನ ಮೇಳ

Upayuktha