ರಾಜ್ಯ ಶಿಕ್ಷಣ

ಶಾಲಾ ಕಾಲೇಜು ಆರಂಭದ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ – ಶಿಕ್ಷಣ ಸಚಿವ ಸುರೇಶ್ ಕುಮಾರ್

ಬೆಂಗಳೂರು: ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ‌ ಕೈಗೊಂಡಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಹೇಳಿದ್ದಾರೆ.

ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯಾವುದೇ ಯೋಚನೆಯು ಸರ್ಕಾರದ ಮುಂದೆ ಇಲ್ಲ. ಈ ಕುರಿತು ಶಾಸಕರ ಮತ್ತು ಸಂಸದರ ಹಾಗೂ ಇತರೆ ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಆಹ್ವಾನಿಸುತ್ತಿದ್ದೇನೆ ಎಂದು ಫೇಸ್‌ಬುಕ್‌ನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ  ಶಿಕ್ಷಕ ಸಂಘಟನೆಗಳೊಂದಿಗೆ ಹಾಗೂ ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಸುತ್ತಿದ್ದೇನೆ. ಸದ್ಯಕ್ಕೆ ಬೀದರ್ ಜಿಲ್ಲೆಯ ಪ್ರವಾಸದಲ್ಲಿದ್ದು ಬೆಂಗಳೂರಿಗೆ ಬಂದ ನಂತರ ಈ ಕುರಿತು ಇನ್ನಷ್ಟು ವಿವರವಾಗಿ ವಾಸ್ತವಾಂಶವನ್ನು ತಿಳಿಸುತ್ತೇನೆ ಎಂದು ಹೇಳಿದ್ದಾರೆ.

ನಮ್ಮ ರಾಜ್ಯದ ಶಾಲೆ-ಕಾಲೇಜು ಪ್ರಾರಂಭ ಮಾಡುವ ದಿನಾಂಕದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಮತ್ತೊಮ್ಮೆ ಸುರೇಶ್‌ ಕುಮಾರ್‌ ಸ್ಪಷ್ಟನೆ ನೀಡಿದ್ದಾರೆ

Related posts

ಜೂನ್ 18 ದ್ವಿತೀಯ ಪಿಯುಸಿ ಪರೀಕ್ಷೆ: ದ.ಕ ಜಿಲ್ಲೆಯಲ್ಲಿ 26,942 ವಿದ್ಯಾರ್ಥಿಗಳು

Upayuktha

ಉಜಿರೆ: ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ಸಹ ಪ್ರಾಧ್ಯಾಪಕ ನಿತ್ಯಾನಂದ ಬಾಂದೇಕರರಿಗೆ ಪಿ.ಎಚ್.ಡಿ

Sushmitha Jain

ಖಾಸಗಿ ಬ್ಯಾಂಕುಗಳಿಂದ ಎದುರಾಗುವ ಸಮಸ್ಯೆ ಪರಿಹರಿಸಲು ಸರ್ಕಾರ ಸಿದ್ಧ: ಕೋಟಾ ಶ್ರೀನಿವಾಸ ಪೂಜಾರಿ

Upayuktha