ನಗರ ಸ್ಥಳೀಯ

ರಸ್ತೆ ನಿಯಮ ಕಡ್ಡಾಯವಾಗಿ ಪಾಲಿಸಿ: ಆರ್‌ಟಿಓ ರಾಮಕೃಷ್ಣ ರೈ

ಮಂಗಳೂರು: ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವುದರ ಮೂಲಕ ಜೀವವನ್ನು ಉಳಿಸಸುವುದು ನಮ್ಮ ಮೊದಲ ಕರ್ತವ್ಯವಾಗಿರುತ್ತದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ರಾಮಕೃಷ್ಣ ರೈ ಹೇಳಿದರು.

ಪ್ರಾದೇಶಿಕ ಸಾರಿಗೆ ಕಚೇರಿಯ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ 31 ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಇವರು ಎಲ್ಲರೂ ರಸ್ತೆ ನಿಯಮ ಕಡ್ಡಾಯವಾಗಿ ಪಾಲಿಸಬೇಕು, ವಾಹನ ಚಾಲನೆ ಸಮಯದಲ್ಲಿ ಮೊಬೈಲ್ ಬಳಸಬಾರದು ಹಾಗೂ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವುದರ ಜೊತೆಗೆ ವಾಹನಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ತಮ್ಮ ಬಳಿ ಹೊಂದಿರಬೇಕು. ವಾಹನಗಳನ್ನು ಜಾಗರೂಕತೆಯಿಂದ ಚಲಾಯಿಸಬೇಕು ಎಂದು ಸಲಹೆ ನೀಡಿದರು.

ಸಮಾರಂಭದಲ್ಲಿ ಭಾಗವಹಿಸಿದ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಜೆ.ಪಿ. ಗಂಗಾಧರ್ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಅಪಘಾತಗಳ ಸಂಖ್ಯೆಯು ಗಣನೀಯವಾಗಿ ಕಡಿಮೆವಾಗುತ್ತಿದೆ ಅದರಂತೆ ನಮ್ಮ ಜಿಲ್ಲೆಯಲ್ಲಿ ಮುಂದಿನ ದಿನದಲ್ಲಿ ಅಪಘಾತ ಕಡಿಮೆ ಮಾಡುವ ನಿಟ್ಟಿನಲ್ಲಿ ನಾವು ಶ್ರಮಿಸಬೇಕು ಎಂದರು.

ರಸ್ತೆಯಲ್ಲಿ ಸಂಭವಿಸುವಂತಾ ಅಪಘಾತವನ್ನು ತಡೆಗಟ್ಟುವ ನಿಟ್ಟಿನಲ್ಲಿ ಡ್ರೈವಿಂಗ್ ಸೂಲ್ಸ್‌ ಪಾತ್ರ ಅತೀ ಮುಖ್ಯವಾಗಿರುತ್ತದೆ. ತರಬೇತಿ ನೀಡುವ ಸಮಯದಲ್ಲಿ ಅವರು ಉತ್ತಮ ರೀತಿಯಲ್ಲಿ ತರಬೇತಿ ನೀಡಬೇಕು ಎಂದರು.

ಸಮಾರಂಭಕ್ಕೆ ಸಾರ್ವಜನಿಕರು, ವಾಹನ ತರಬೇತುದಾರರು, ಸಾರಿಗೆ ವಾಹನ ಮಾಲೀಕರು, ಮಾರಾಟಗಾರರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

(ಉಪಯುಕ್ತ ನ್ಯೂಸ್)

ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

Related posts

“ಬಾಲಗೌರವ ಪ್ರಶಸ್ತಿ” – ಅರ್ಜಿ ಆಹ್ವಾನ

Upayuktha

ಗಣಿತ ಸಮಸ್ಯೆಗಳಿಗೆ ಸಾಫ್ಟ್‌ವೇರ್‌ ಅಗತ್ಯ: ಡಾ. ಚೇತನಾ

Upayuktha

ವಿದ್ಯಾರ್ಥಿಗಳಲ್ಲಿ ನಿಷ್ಠೆ ಮತ್ತು ಜ್ಞಾನವನ್ನು ತುಂಬುವ ಕೇಂದ್ರ ವಿಷ್ಣುಗುಪ್ತ ವಿಶ್ವವಿದ್ಯಾಪೀಠ: ರಾಘವೇಶ್ವರ ಶ್ರೀಗಳು

Upayuktha