ಕ್ಯಾಂಪಸ್ ಸುದ್ದಿ ಗ್ರಾಮಾಂತರ ಸ್ಥಳೀಯ

ಆಳ್ವಾಸ್ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ‘ಓರಿಯೆಂಟೇಷನ್ ಕಾರ್ಯಕ್ರಮ’

ಮೂಡಬಿದಿರೆ: ಗುಣಮಟ್ಟದ ಉನ್ನತ ಶಿಕ್ಷಣ ನಮ್ಮೆಲ್ಲರ ಆದ್ಯತೆಯಾಗಿ, ಶೈಕ್ಷಣಿಕ ಜಗತ್ತಿನ ಮುಂಚೂಣಿಯಲ್ಲಿ ಭಾರತ ನಿಲ್ಲುವಂತಾಗಬೇಕು ಎಂದು ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ| ಕುರಿಯನ್ ಹೇಳಿದರು.

ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಪ್ರಥಮ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಕಾಲೇಜಿನ ಆಂತರಿಕ ಗುಣಮಟ್ಟದ ಭರವಸೆ ಕೋಶದಿಂದ ಆಯೋಜಿಸಲ್ಪಟ್ಟ ‘ಓರಿಯೆಂಟೇಷನ್ ಕಾರ್ಯಕ್ರಮ’ದಲ್ಲಿ ಮಾತನಾಡಿದರು.

ಒಂದು ದೇಶದ ನಿಜವಾದ ಅಭಿವೃದ್ದಿಯನ್ನು ಆ ದೇಶದ ಉನ್ನತ ಶಿಕ್ಷಣದ ಗುಣಮಟ್ಟದ ಸೂಚ್ಯಂಕದ ಮೇಲೆ ನಿರ್ಧರಿಸಲಾಗುತ್ತದೆ. ಈ ಕಾಲಕ್ಕನುಗುಣವಾದ ಮೌಲ್ಯಯುತ ಶಿಕ್ಷಣವನ್ನು ಪಡೆದಾಗ ಮಾತ್ರ ನಮ್ಮ ಬೆಳವಣಿಗೆಯೊಂದಿಗೆ ದೇಶದ ಬೆಳವಣಿಗೆಗೆ ನಾವು ಕೊಡುಗೆ ನೀಡಲು ಸಾಧ್ಯ. ಉನ್ನತ ಶಿಕ್ಷಣ ಪಡೆದ ಪ್ರತಿಯೊಬ್ಬರೂ, ತನ್ನ ಜ್ಞಾನದ ನೆಲೆಯಲ್ಲಿ ಈ ದೇಶಕ್ಕೆ ಕೊಡುಗೆ ನೀಡಲು ಮುಂದಾಗಬೇಕು. ನಾವು ಈ ನೆಲದಿಂದ ಪಾಂಡಿತ್ಯವನ್ನು ಪಡೆಯುವವರು ಮಾತ್ರ ಆಗದೆ, ಜ್ಞಾನವನ್ನು ಇನ್ನೊಬ್ಬರಿಗೆ ನೀಡುವವರಾಗಬೇಕು. ಈ ಹಿನ್ನಲೆಯಲ್ಲಿ ನಮ್ಮ ಉನ್ನತ ಶಿಕ್ಷಣದ ತರಗತಿಯ ಬೋಧನೆಗಳು ರಚನಾತ್ಮಕತೆಯಿಂದ ಕೂಡಿರಬೇಕು ಎಂದರು.

ವಿದ್ಯಾರ್ಥಿಗಳು ಜ್ಞಾನದೊಂದಿಗೆ ತಮ್ಮ ಬೆಳವಣಿಗೆಯನ್ನು ಕಾಣುತ್ತಾ, ಸದಾ ಸಕಾರಾತ್ಮಕ ದೃಷ್ಠಿಕೊನದೊಂದಿಗೆ ತಮ್ಮ ಜವಾಬ್ದಾರಿಯನ್ನು ನಿರ್ವಹಿಸುವವರಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ, “ಹೊಸ ವಿಷಯವನ್ನು ಕಲಿಯುವಲ್ಲಿ ವಿದ್ಯಾರ್ಥಿಗಳ ಸಹಭಾಗವಹಿಸುವಿಕೆ ಅತೀ ಮುಖ್ಯ ಹಾಗೂ ಪ್ರತಿಯೊಬ್ಬರೂ ತಮ್ಮ ಬಗೆಗಿರುವ ಕೀಳರಿಮೆಯಿಂದ ಹೊರ ಬಂದಾಗ ಮಾತ್ರ ನಮ್ಮಲ್ಲಿ ಸಾಧಿಸುವ ಛಲ ಮೂಡುತ್ತದೆ. ಯಾವುದೇ ಕ್ಷೇತದಲ್ಲಿ ಸಫಲತೆಯನ್ನು ಕಾಣಲು, ಸ್ಪಷ್ಟವಾದ ಗುರಿ, ಸರಿಯಾದ ಮಾರ್ಗದರ್ಶನ, ಹಾಗೂ ನಮ್ಮ ಪಾಲ್ಗೊಳ್ಳುವಿಕೆ ಮುಖ್ಯವೆನಿಸುತ್ತದೆ ಎಂದರು.

ಕಾರ್ಯಕ್ರಮದ ಆರಂಭದಲ್ಲಿ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗ ನಿರ್ಮಿಸಿದ್ದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ಕರ‍್ಯಕ್ರಮಗಳ ವಿಡಿಯೋವನ್ನು ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ವಿವಿಧ ಕೋಶಗಳ ಮುಖ್ಯಸ್ಥರುಗಳಾದ ಡಾ ಮೂಕಾಂಬಿಕ, ಶಾಜಿಯಾ ಕಾನುಮ್, ಡಾ ಅಶೋಕ ಡಿಸೋಜಾ, ಅಶೋಕ ಕೆ.ಜಿ, ಸುಧೀಂದ್ರ ಶಾಂತಿ, ಡಾ ಸುಕೇಶ, ಹಾಗೂ ಕೃಷ್ಣಮೂರ್ತಿ ಪರಿಚಯಿಸಿದರು.

ವೇದಿಕೆಯಲ್ಲಿ ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ನ ಶೆಟ್ಟಿ, ಐಕ್ಯೂಎಸಿ ಸಂಯೋಜಕ ಡಾ| ರಾಜೇಶ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಅರ್ಪಿತಾ ಸ್ವಾಗತಿಸಿ, ಪ್ರದ್ವಿನಿ ವಂದಿಸಿ, ಶಿವಾನಿ ಶೆಟ್ಟಿ ನಿರೂಪಿಸಿದರು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

Related posts

ಆಶಾ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತರು ಮನೆ ಮನೆ ಭೇಟಿ: ಸಾರ್ವಜನಿಕರ ಸಹಕಾರ ಕೋರಿಕೆ

Upayuktha

ಸಂಗೀತ ಪ್ರೇಮಿಗಳಿಗೆ ಹಬ್ಬ: ರಾಮಕೃಷ್ಣ ಮಠದಲ್ಲಿ ಮಂಗಳೂರು ಸಂಗೀತೋತ್ಸವ 2019

Upayuktha

ಪತ್ರಕರ್ತರ ರಾಜ್ಯ ಸಮ್ಮೇಳನಕ್ಕೆ ಜಿಲ್ಲಾಡಳಿತದ ಸಂಪೂರ್ಣ ಸಹಕಾರ: ಸಚಿವ ಕೋಟ ಶ್ರೀನಿವಾಸ ಪೂಜಾರಿ

Upayuktha