ರೆಡ್ ಕ್ರಾಸ್ಗೆ 100 ವರ್ಷ ಸಂದ ಸಂದರ್ಭದಲ್ಲಿ ವಿವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಪರಿಚಯ ಕಾರ್ಯಕ್ರಮ
ಮಂಗಳೂರು: ನಮ್ಮೊಳಗಿನ ಮಾನವೀಯತೆಯ ಕರೆಗೆ ಓಗೊಟ್ಟು ಪ್ರೋತ್ಸಾಹ, ಒತ್ತಡಗಳಿಲ್ಲದೆ ಸಹಾಯ ಮಾಡುವ ಅದ್ಭುತ ಪ್ರವೃತ್ತಿಯೇ ಸ್ವಯಂಸೇವೆ. ಇದರ ಅಗತ್ಯ ಹಿಂದೆಂದಿಗಿಂತಲೂ ಈಗ ಹೆಚ್ಚಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಯುವ ರೆಡ್ಕ್ರಾಸ್ ಸಂಯೋಜಕ ಸಚೇತ್ ಸುವರ್ಣ ಅಭಿಪ್ರಾಯಪಟ್ಟರು.
ಅವರು ಮಂಗಳೂರು ವಿಶವ್ವಿದ್ಯಾನಿಲಯ ಮತ್ತು ವಿಶ್ವವಿದ್ಯಾನಿಲಯ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕಗಳು ಜಂಟಿಯಾಗಿ ಬುಧವಾರ ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ರೆಡ್ಕ್ರಾಸ್ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಓರಿಯಂಟೇಷನ್ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡುತ್ತಿದ್ದರು.
“ಹೆನ್ರಿ ಡ್ಯುನಂಟ್ ಸ್ಥಾಪಿಸಿದ ಅಂತಾರಾಷ್ಟ್ರೀಯ ಸಂಘಟನೆ ರೆಡ್ ಕ್ರಾಸ್ಗೆ 100 ವರ್ಷ ಸಂದ ಈ ಸಂದರ್ಭದಲ್ಲಿ ನಾವು ಫಲಾಪೇಕ್ಷೆಯಿಲ್ಲದೆ ಸೇವೆ ಮಾಡಿ ಆಂತರ್ಯದ ಸಂತಸ ಕಾಣುವ ಪ್ರವೃತ್ತಿ ರೂಢಿಸಿಕೊಳ್ಳಬೇಕು. ರೆಡ್ ಕ್ರಾಸ್ ಮೂಲಕ ವೈಯಕ್ತಿಕ ಕೌಶಲಗಳನ್ನು ಬೆಳೆಸಿಕೊಳ್ಳುವ ಜೊತೆಗೆ ಸಮಾಜಕ್ಕೆ ಸ್ಪಂದಿಸಿ”, ಎಂದವರು ಕರೆ ನೀಡಿದರು.
ಮುಖ್ಯ ಅತಿಥಿ ಮಂಗಳೂರು ವಿಶ್ವವಿದ್ಯಾನಿಲಯದ ರೆಡ್ಕ್ರಾಸ್ ನೋಡಲ್ ಅಧಿಕಾರಿ ಡಾ. ಗಣಪತಿ ಗೌಡ ಮಾತನಾಡಿ ರೆಡ್ ಕ್ರಾಸ್ ವ್ಯಕ್ತಿಯನ್ನು ಸಮಾಜಮುಖಿಯನ್ನಾಗಿಸುವ ಜೊತೆಗೆ ತಾರತಮ್ಯರಹಿತತೆ, ತಟಸ್ಥತೆ, ಸ್ವಾತಂತ್ರ್ಯ, ಸ್ವಯಂ ಸೇವೆ ಮತ್ತು ಸಾರ್ವತ್ರಿಕತೆಯ ಅಮೂಲ್ಯ ಪಾಠ ಬೋಧಿಸುತ್ತದೆ ಎಂದರು. ಅಧ್ಯಕ್ಷೀಯ ನುಡಿಗಳನ್ನಾಡಿದ ವಿವಿ ಕಾಲೇಜಿನ ಪ್ರಾಂಶುಪಾಲ ಡಾ. ಎ ಹರೀಶ, ಕಾಲೇಜಿನ ಯುವ ರೆಡ್ಕ್ರಾಸ್ ಘಟಕದ ಯೋಜನೆಗಳಿಗೆ ಶುಭ ಕೋರಿದರು.
ಕಾಲೇಜಿನ ಯುವ ರೆಡ್ಕ್ರಾಸ್ನ ಕಾರ್ಯಕ್ರಮ ಅಧಿಕಾರಿ ಡಾ. ಕುಮಾರಸ್ವಾಮಿ ಎಂ ಸ್ವಾಗತ ಕೋರಿದರು. ಪ್ರಣಾಮ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಕಾರ್ಯದರ್ಶಿ ನಿಶಾಂತ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಟ್ವಿಟರ್ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ
ಯೂಟ್ಯೂಬ್ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ