ನಗರ ಸ್ಥಳೀಯ

ಪಣಂಬೂರು ಕಡಲತೀರದಲ್ಲಿ ಸ್ವಚ್ಛತಾ ಅಭಿಯಾನ, ಯೋಗ ಶಿಬಿರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೌರ ರರಕ್ಷಣಾ ತಂಡದ ವತಿಯಿಂದ ಕಡಲ ತೀರ ಸ್ವಚ್ಛತಾ ಅಭಿಯಾನದ ಅಂಗವಾಗಿ 4ನೇ ಕಾರ್ಯಕ್ರಮ ಇಂದು (ನ.29) ಪಣಂಬೂರು ಬೀಚ್‍ನಲ್ಲಿ ನಡೆಯಿತು.

ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಖ್ಯಾತ ಯೋಗ ಗುರು, ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರ ಮಾರ್ಗದರ್ಶನದಲ್ಲಿ ಯೋಗ ಪ್ರಾಣಾಯಾಮ ಮತ್ತು ಧ್ಯಾನ ಶಿಬಿರ ಬೆಳಗ್ಗೆ 7.00 ರಿಂದ 8.00 ಗಂಟೆಯವರೆಗೆ ನಡೆಯಿತು.

ಯೋಗ ಶಿಬಿರ ನಡೆಸಿಕೊಟ್ಟ ಖ್ಯಾತ ಯೋಗ ಗುರು, ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಇವರು ಮಾತನಾಡಿ ಕೋವಿಡ್-19 ರೋಗ ಹರಡುವ ಸಂದರ್ಭ ಕೆಲಸ ನಿರ್ವಹಿಸುವ ಗೃಹರಕ್ಷಕರಿಗೆ ಆರೋಗ್ಯದೃಷ್ಟಿಯಿಂದ ಈ ಶಿಬಿರ ಹೆಚ್ಚು ಉಪಯುಕ್ತ ಮತ್ತು ಗೃಹರಕ್ಷಕರ ರಕ್ಷಣಾ ವ್ಯವಸ್ಥೆಯನ್ನು ವೃದ್ಧಿಸಿ, ಆರೋಗ್ಯವನ್ನು ಹೆಚ್ಚಿಸುತ್ತದೆ ಎಂದರು.

ಯೋಗ ಶಿಬಿರದ ಬಳಿಕ ಗೃಹರಕ್ಷಕರು ಮತ್ತು ಪೌರರಕ್ಷಣಾ ತಂಡದ ಕಾರ್ಯಕರ್ತರಿಂದ ಪಣಂಬೂರು ಕಡಲ ತೀರದ ಸ್ವಚ್ಛತಾ ಕಾರ್ಯಕ್ರಮ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೌರರಕ್ಷಣಾ ಪಡೆಯ ಚೀಫ್‍ ವಾರ್ಡನ್ ಡಾ|| ಮುರಲೀಮೋಹನ್ ಚೂಂತಾರು ಅವರ ಅಧ್ಯಕ್ಷತೆಯಲ್ಲಿ ಜರಗಿತು. ಸುಮಾರು 30 ಮಂದಿ ಈ ಶಿಬಿರದಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಗಳಾದ ಸುನಿಲ್ ಕುಮಾರ್, ದಿವಾಕರ್, ಸುನಿಲ್, ನಿಶಾಲ್, ದುಶ್ಯಂತ್ ರೈ, ಸರಸ್ವತಿ, ಕವಿತಾ, ಪೌರರಕ್ಷಣಾ ಪಡೆಯ ಅಜಯ್ ಹಾಗೂ ಇನ್ನಿತರ ಗೃಹರಕ್ಷಕ/ಗೃಹರಕ್ಷಕಿಯರು ಹಾಜರಿದ್ದರು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

Related posts

ಮೀನುಗಾರಿಕೆ: ಮತ್ಸ್ಯ ಸಂಪತ್ತು ಉಳಿಸಲು ಮೀನಿನ ಕನಿಷ್ಟ ಗಾತ್ರ ನಿಗದಿ

Upayuktha

ಕೃಷಿ ಪಾಠ: ಬಂಗಾರದ ಬೆಳೆ ಬೆಳೆದ ಶ್ರೀರಾಮ ವಿದ್ಯಾ ಕೇಂದ್ರದ ಮಕ್ಕಳು

Upayuktha

ಉಡುಪಿ: ಬಿಳಿ ಪ್ರಬೇಧದ ಗೂಬೆ ಮರಿಯ ರಕ್ಷಣೆ

Upayuktha