ರಾಜ್ಯ

ಕೊರೊನಾ ವಿಪತ್ತು: ಗೋಶಾಲೆಗಳಿಗೆ 200 ಕೋಟಿ ರೂ ಪ್ಯಾಕೇಜ್ ನೀಡಲು ಒತ್ತಾಯ

ಕೇಂದ್ರಕ್ಕೆ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥರ ಪತ್ರ

ಉಡುಪಿ: ಕೊರೊನಾ ವಿಪತ್ತಿನಿಂದ ದೇಶದ ನೂರಾರು ಗೋಶಾಲೆಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದು ತುರ್ತಾಗಿ ಕನಿಷ್ಠ 200 ಕೋಟಿ ರೂಗಳ ನಿರ್ವಹಣಾ ನಿಧಿಯನ್ನು ನೀಡಬೇಕೆಂದು ಒತ್ತಾಯಿಸಿ ಉಡುಪಿ ಗೋವರ್ಧನ ಗಿರಿ ಟ್ರಸ್ಟ್ (ರಿ) ಅಧ್ಯಕ್ಷ, ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಕೇಂದ್ರ ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದಾರೆ.

ಕಳೆದ ಆರೇಳು ತಿಂಗಳುಗಳಿಂದ ಕೊರೊನಾದಿಂದಾಗಿ ವಿವಿಧ ಕ್ಷೇತ್ರಗಳು ಗಂಭೀರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವಂತೆಯೇ ದೇಶದ ಗೋಶಾಲೆಗಳೂ ತೊಂದರೆಗೊಳಗಾಗಿವೆ. ಗೋಶಾಲೆಗಳ ನಿರ್ವಹಣೆ ಅತ್ಯಂತ ವೆಚ್ಚದಾಯಕವಾಗಿದೆ .ಉಡುಪಿಯಲ್ಲಿ ನೀಲಾವರ ಕೊಡವೂರು ಹೆಬ್ರಿಯಲ್ಲಿ ನಾವು ನಡರಸುತ್ತಿರುವ ಗೋಶಾಲೆಗಳಿಗೇ ಮಾಸಿಕ ಅಂದಾಜು 35 ಲಕ್ಷ ರೂ ನಿರ್ವಹಣಾ ವೆಚ್ಚ ಇದೆ. ಅದೇ ರೀತಿಯಲ್ಲಿ ಇದಕ್ಕೊ ದೊಡ್ಡ ಅಥವಾ ಸಣ್ಣ ಮಟ್ಟದ ಗೋಶಾಲೆಗಳನ್ನು ಅನೇಕ ಮಠ ದೇವಳ ಹಾಗೂ ಮಹನೀಯರು ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಕರ್ತವ್ಯದ ದೃಷ್ಟಿಯಿಂದ ನಡೆಸುತ್ತಾ ಲಕ್ಷಾಂತರ ಗೋವುಗಳನ್ನು ಪೋಷಿಸುತ್ತಿದ್ದಾರೆ.

ಧರ್ಮಾಭಿಮಾನಿಗಳ ಸಹಕಾರದಿಂದ ಇದು ಸಾಧ್ಯವಾಗುತ್ತಿತ್ತು . ಆದರೆ ಪ್ರಸ್ತುತ ಭಕ್ತರ ದೇಣಿಗೆಯೂ ಅಷ್ಟಾಗಿ ಬರುತ್ತಿಲ್ಲ; ಮೇಲಾಗಿ ಎರಡು ತಿಂಗಳಿನಿಂದ ದೇಶದ ಕೆಲವೆಡೆಗಳಲ್ಲಿ ವಿಪರೀತ ಮಳೆಯೂ ಸುರಿಯುತ್ತಿರುವುದರಿಂದ ಮೇವಿನ ಸಂಗ್ರಹಣೆಯೂ ದುಸ್ತರವಾಗುತ್ತಿದೆ.

ಆದ್ದರಿಂದ ಕೊರೊನಾ ವಿಪತ್ತನ್ನು ಎದುರಿಸಲು ಬೇರೆ ಬೇರೆ ಕ್ಷೇತ್ರಗಳಿಗೆ ಸರಕಾರವು ಆರ್ಥಿಕ ಪ್ಯಾಕೇಜ್ ಘೋಷಿಸಿದಂತೆ ಗೋಶಾಲೆಗಳಿಗೂ ಕನಿಷ್ಠ 200 ಕೋಟಿಯಾದರೂ ತುರ್ತಾಗಿ ನೀಡಿ ಗೋರಕ್ಷಣೆಯ ಕೈಂಕರ್ಯದಲ್ಲಿ ಕೈಜೋಡಿಸಬೇಕು. ಕೇವಲ ಧರ್ಮ ‌ಮಾತ್ರವಲ್ಲದೇ ಆರ್ಥಿಕತೆಯ ಹಿತದೃಷ್ಟಿಯಿಂದಲೂ ಗೋರಕ್ಷಣೆಯನ್ನು ಆದ್ಯತೆಯಾಗಿ ಪರಿಗಣಿಸಬೇಕೆಂದು ಪೇಜಾವರ ಶ್ರೀಗಳು ಒತ್ತಾಯಿಸಿದ್ದಾರೆ.‌

 

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

 

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್  App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

Related posts

ನಗರದಲ್ಲಿರುವ ಕೆಮಿಕಲ್ ಗೋದಾಮುಗಳನ್ನು ತೆರವುಗೊಳಿಸಲು ಕಮಲ್ ಪಂತ್ ಆದೇಶ

Harshitha Harish

ನಾಳೆ ಬಂದ್ ಹಿನ್ನೆಲೆ ಬಸ್ಸುಗಳ ಕಾರ್ಯಾಚರಣೆಯಲ್ಲಿ‌ ಯಾವುದೇ ಬದಲಾವಣೆ ಇಲ್ಲ – ಕೆಎಸ್ಆರ್‌ಟಿಸಿ

Harshitha Harish

ಬೆಂಗಳೂರಿನಿಂದ ನಾಲ್ಕು ಹೆಚ್ಚುವರಿ ವಿಶೇಷ ರೈಲಿಗೆ ಅನುಮತಿ

Harshitha Harish