ನವದೆಹಲಿ: ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ರವರು ನಿಧನರಾಗಿದ್ದು, ಅವರ ಮೃತದೇಹವನ್ನು ಏಮ್ಸ್ ಆಸ್ಪತ್ರೆಯಿಂದ ಅವರ ನಿವಾಸಕ್ಕೆ ಕರೆತಂದು ಇದೀಗ ಗಣ್ಯರ ದರ್ಶನಕ್ಕೆ ಇಡಲಾಗಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಅವರು ಇಂದು ಬೆಳಗ್ಗೆ ರಾಮ್ ವಿಲಾಸ್ ಪಾಸ್ವಾನ್ ಅವರ ನಿವಾಸಕ್ಕೆ ತೆರಳಿ ಅಂತಿಮ ದರ್ಶನ ಪಡೆದರು.
#WATCH Delhi: Prime Minister Narendra Modi pays last respects to Union Minister and LJP leader Ram Vilas Paswan at the latter's residence.
The LJP leader passed away yesterday. pic.twitter.com/rDgRrHl7aT
— ANI (@ANI) October 9, 2020
ಎಲ್ ಜೆಪಿ ನಾಯಕ 74 ವರ್ಷದ ರಾಮ್ ವಿಲಾಸ್ ಪಾಸ್ವಾನ್ ಅವರು ಇತ್ತೀಚೆಗೆ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಹಾಗೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಇಹಲೋಕ ತ್ಯಜಿಸಿದ್ದರು.
ಅವರ ನಿಧನರಾದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಭವನ, ಸಂಸತ್ತು, ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಶೋಕಾಚರಣೆ ಮಾಡಲಾಗುತ್ತಿದೆ. ರಾಷ್ಟ್ರಪತಿ ಭವನ ಮತ್ತು ಸಂಸತ್ತಿನ ಕಟ್ಟಡಗಳಲ್ಲಿ ದೇಶದ ಬಾವುಟವನ್ನು ಇಂದು ಅರ್ಧ ಮಟ್ಟಕ್ಕೆ ಇಳಿಸಲಾಗಿದೆ.