ಬಂಟ್ವಾಳ: ಜೂನ್ 25ರಂದು ಆರಂಭಗೊಳ್ಳಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಯ ಸಿದ್ಧತಾ ಪೂರ್ವಭಾವಿ ಸಭೆಯು ಬಂಟ್ವಾಳ ಶಾಸಕ ರಾಜೇಶ್ ನಾಯಕ್ ನೇತೃತ್ವದಲ್ಲಿ ಜರಗಿತು.
ಬಂಟ್ವಾಳ ತಾಲೂಕಿನಲ್ಲಿ 5,200 ವಿದ್ಯಾರ್ಥಿಗಳು 17 ಪರೀಕ್ಷಾಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದು ಶಿಕ್ಷಕರ ಜೊತೆ ಇತರ ಇಲಾಖಾಧಿಕಾರಿಗಳು ಸಹಕರಿಸುವಂತೆ ಸೂಚಿಸಲಾಯಿತು. ಪರೀಕ್ಷಾ ಕೇಂದ್ರಕ್ಕೆ ಹಾಜರಾಗಲು ವಿದ್ಯಾರ್ಥಿಗಳಿಗೆ ವಾಹನದ ವ್ಯವಸ್ಥೆ, ಆಹಾರ ಮತ್ತು ಕುಡಿಯುವ ನೀರಿನ ವ್ಯವಸ್ಥೆಯ ಬಗ್ಗೆ ಚರ್ಚಿಸಲಾಯಿತು.
ಪ್ರತಿಯೊಂದು ಪರೀಕ್ಷಾಕೇಂದ್ರಗಳಲ್ಲಿ ಆರೋಗ್ಯ ತಪಾಸಣೆ, ಮಾಸ್ಕ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು. ಈ ವ್ಯವಸ್ಥೆಗಳಿಗೆ ಶಿಕ್ಷಕರಿಗೆ ಪ್ರತ್ಯೇಕ ಜವಾಬ್ದಾರಿಯನ್ನು ನೀಡಲಾಯಿತು.
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಮತ್ತು ಹೆತ್ತವರು ಯಾವುದೇ ರೀತಿಯಲ್ಲಿ ಭಯಭೀತರಾಗುವ ಆವಶ್ಯಕತೆಯಿಲ್ಲ; ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಹೆಚ್ಚಿನ ನಿಗಾವಹಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್ App ಈಗ ಲಭ್ಯ. ಪ್ಲೇ ಸ್ಟೋರ್ನಿಂದ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ
ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಟ್ವಿಟರ್ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ
ಯೂಟ್ಯೂಬ್ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ