ನವದೆಹಲಿ : ರಾಷ್ಟ್ರ ರಾಜಧಾನಿ ನವದೆಹಲಿಯ ಆರ್ ಆರ್ ಆಸ್ಪತ್ರೆಯಲ್ಲಿ ಬುಧವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕೋವಿಡ್ ವೈರಸ್ ಲಸಿಕೆಯನ್ನು ಹಾಕಿಸಿಕೊಂಡರು.
60 ವರ್ಷ ಮೇಲ್ಪಟ್ಟ ವರು ಮತ್ತು 45 ವರ್ಷ ಮೇಲ್ಪಟ್ಟ ಅನಾರೋಗ್ಯ ಪೀಡಿತರಿಗೆ ಕೊರೊನಾವೈರಸ್ ಲಸಿಕೆಯನ್ನು ಹಾಕಿಸುವ ಕಾರ್ಯಕ್ರಮ ಆರಂಭಿಸಿದ 2 ದಿನಗಳ ನಂತರ, ಕೊವಿಡ್-19 ವಿರುದ್ಧ ಲಸಿಕೆಯನ್ನು ಹಾಕಿಸಿದರು.
ಈ ಮೊದಲು ಇಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಸಾಂಕ್ವೆಲಿಮ್ ನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (ಪಿಎಚ್ ಸಿ) ಕೋವಿಡ್-19 ಲಸಿಕೆಯ ಮೊದಲ ಡೋಸ್ ಅನ್ನು ತೆಗೆದುಕೊಂಡರು.