ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ಅಂಬಿಕಾ ಪದವಿ ಕಾಲೇಜಿನಲ್ಲಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

ಪ್ರತಿಭೆಯ ಅನಾವರಣಕ್ಕೆ ಸೂಕ್ತ ವೇದಿಕೆ ಅಗತ್ಯ: ಪುಷ್ಪಾವತಿ

ಪುತ್ತೂರು: ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ವಿಶಿಷ್ಟವಾದ ಪ್ರತಿಭೆ ಅಡಗಿರುತ್ತದೆ. ಆದರೆ ಅದನ್ನು ಗುರುತಿಸುವಂತಹ ವೇದಿಕೆಗಳಿದ್ದಾಗ ಮಾತ್ರ ಅವುಗಳು ಅನಾವರಣಗೊಳ್ಳುವುದಕ್ಕೆ ಸಾಧ್ಯ. ವಿದ್ಯಾರ್ಥಿಗಳು ಸದಾ ಚಟುವಟಿಕೆಯಿಂದಿರುವುದಕ್ಕೂ ವಿವಿಧ ವೇದಿಕೆಗಳು ಅನುವು ಮಾಡಿಕೊಡುತ್ತವೆ ಎಂದು ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಸತಿಯುತ ಪದವಿಪೂರ್ವ ವಿದ್ಯಾಲಯದ ಕನ್ನಡ ಉಪನ್ಯಾಸಕಿ ಪುಷ್ಪಲತಾ ಹೇಳಿದರು.

ಅವರು ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿ ಮಹಾವಿದ್ಯಾಲಯದ ಐಕ್ಯುಎಸಿ ಘಟಕ ಹಾಗೂ ವಿವಿಧ ವಿಭಾಗಗಳ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿ ಶನಿವಾರ ಮಾತನಾಡಿದರು.

ವಿದ್ಯಾರ್ಥಿಗಳು ಪಠ್ಯಚಟುವಟಿಕೆಗಳೊಂದಿಗೆ ಪಾಠೇತರ ಸಂಗತಿಗಳಲ್ಲಿಯೂ ತೊಡಗಿಸಿಕೊಳ್ಳಬೇಕಾದ್ದು ಅಗತ್ಯ. ನಮಗೆ ದೊರಕುವ ಅವಕಾಶಗಳನ್ನು ಹೇಗೆ ಬಳಸಿಕೊಳ್ಳುತ್ತೇವೆ ಎನ್ನುವುದು ಅತ್ಯಂತ ಮುಖ್ಯ. ಸರಿಯಾದ ರೀತಿಯಲ್ಲಿ ಸಿಕ್ಕ ವೇದಿಕೆಗಳನ್ನು ಉಪಯೋಗಿಸಿಕೊಂಡಾಗ ಇತರರು ನಮ್ಮನ್ನು ಗುರುತಿಸುವುದಕ್ಕೆ ಸಾಧ್ಯವಾಗುತ್ತದೆ. ಒಬ್ಬ ವಿದ್ಯಾರ್ಥಿ ವಿದ್ಯಾಸಂಸ್ಥೆಯಲ್ಲಿ ತನಗೆ ದೊರೆಯುವ ಎಲ್ಲಾ ಅವಕಾಶಗಳನ್ನು ಬಳಸಿಕೊಂಡು ಮುಂದುವರೆದಾಗ ಮಾದರಿ ವಿದ್ಯಾರ್ಥಿಯಾಗಿ ಹೊರಹೊಮ್ಮಬಹುದು ಎಂದು ನುಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ.ವಿನಾಯಕ ಭಟ್ಟ ಗಾಳಿಮನೆ ಮಾತನಾಡಿ ಪ್ರತಿಭೆ ಎಂಬುದು ಯಾರ ಸೊತ್ತೂ ಅಲ್ಲ. ಪ್ರತಿಯೊಬ್ಬರ ಆಂತರ್ಯದಲ್ಲಿ ಅದು ಅಡಗಿರುತ್ತದೆ. ಪ್ರಾಣಿ ಪಕ್ಷಿಗಳಲ್ಲೂ ಅವುಗಳದ್ದೇ ಆದ ಪ್ರತಿಭೆ ಹುದುಗಿರುತ್ತದೆ. ಹಕ್ಕಿಯೊಂದು ಗೂಡು ಕಟ್ಟುವಲ್ಲಿ ಪ್ರತಿಭೆಯಿದೆ. ಇಂತಹ ಸುಪ್ತ ಪ್ರತಿಭೆ ಹೊರಜಗತ್ತಿಗೆ ಕಾಣಿಸಿಕೊಂಡಾಗ ಜನಮನ್ನಣೆ ದೊರಕುತ್ತದೆ. ಆರಂಭದ ದಿನಗಳಲ್ಲಿ ಪ್ರತಿಭೆ ಗುರುತಿಸಲ್ಪಡದಿದ್ದರೂ ಧೃತಿಗೆಡದೆ ಮುನ್ನಡೆದಾಗ ಯಶಸ್ಸು ನಮ್ಮದಾಗುತ್ತದೆ. ಪ್ರಸ್ತುತ ದಿನಗಳಲ್ಲಿ ಪ್ರತಿಭೆಯನ್ನು ಹೊರಜಗತ್ತಿಗೆ ಕಾಣಿಸುವುದಕ್ಕೆ ಹಲವಾರು ಸುಲಭ ಮಾಧ್ಯಮಗಳಿರುವುದು ಸಂತಸದ ವಿಚಾರ ಎಂದರು.

Home

ಬರವಣಿಗೆ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿ ಶರಣ್ಯಾ ಪ್ರಥಮ ಬಹುಮಾನ ಪಡೆದರು. ವಿದ್ಯಾರ್ಥಿ ಕಾರ್ತಿಕ್ ಸಮಾಧಾನಕರ ಬಹುಮಾನ ಪಡೆದರು. ಪತ್ರಿಕೋದ್ಯಮ ವಿಭಾಗದ ಅನುಪಮ ಭಿತ್ತಿಪತ್ರಿಕೆ ಮೂಲಕ ಆಯೋಜಿಲಾದ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿದ್ಯಾರ್ಥಿ ಮೋಹನ್ ಪ್ರಥಮ ಸ್ಥಾನ ಪಡೆದರು.

ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥ ರಾಕೇಶ್ ಕುಮಾರ್ ಕಮ್ಮಜೆ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಭೌತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಹಾಗೂ ಸ್ಪರ್ಧಾ ಕಾರ್ಯಕ್ರಮಗಳ ಸಂಯೋಜಕ ಅಭಿಷೇಕ್ ವಂದಿಸಿದರು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ಉಪಯುಕ್ತ ನ್ಯೂಸ್ ಸಿಗ್ನಲ್‌ ಗ್ರೂಪಿಗೆ ಜಾಯಿನ್ ಆಗಲು ಈ ಲಿಂಕ್‌ ಬಳಸಿ

 

Related posts

ಮಾರ್ಚ್‌ 1ರಂದು ಕುಂಜೂರು ಶ್ರೀ ದುರ್ಗಾ ಪರಮೇಶ್ವರಿ ಕ್ಷೇತ್ರದಲ್ಲಿ ತ್ರಿಕಾಲ ಪೂಜೆ ಉತ್ಸವ

Upayuktha

ಹವಿಗನ್ನಡ ಕಥೆಗಳ ಮೂರು ಸಂಪುಟ ಮಾ.15ಕ್ಕೆ ಬಿಡುಗಡೆ

Upayuktha

ಫಿಲೋಮಿನಾ ಕಾಲೇಜಿನಲ್ಲಿ ಪದವಿ ತರಗತಿಗಳಿಗೆ ದಾಖಲಾತಿ ಆರಂಭ

Upayuktha