ಮಂಗಳೂರು: ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆಯ ವೇಳೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಇಂದು ಎಸ್ಡಿಪಿಐನ ಕೆಲವು ಕಿಡಿಗೇಡಿಗಳು ಪಾಕಿಸ್ತಾನದ ಪರ ಘೋಷಣೆ ಕೂಗಿದ ಘಟನೆ ನಡೆದಿದೆ.
ಈ ಘಟನೆಯ ವೀಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ವೀಡಿಯೋ ಆರಂಭವಾಗಿ 3 ಸೆಕೆಂಡ್ಗಳ ಬಳಿಕ ದುಷ್ಕರ್ಮಿಗಳು ಪಾಕಿಸ್ತಾನದ ಪರ ಘೋಷಣೆ ಕೂಗುತ್ತಿರುವುದು ಕಂಡುಬರುತ್ತದೆ.
ಈ ವೀಡಿಯೋವನ್ನು ಪೊಲೀಸರು ಪರಿಶೀಲಿಸುತ್ತಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು ಎಂದು ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಸ್.ಡಿ.ಪಿ.ಐ ಸಂಘಟನೆಯ ಸುಮಾರು 10-15 ಜನ ಬೆಂಬಲಿಗರ ವಿರುದ್ದ ಅ.ಕ್ರ 99/20 ಕಲಂ 143,124A r/w 149 ಪ್ರಕರಣ ದಾಖಲಾಗಿದ್ದು, ಕಿಡಿಗೇಡಿಗಳ ಪತ್ತೆ ಕಾರ್ಯ ನಡೆಯುತ್ತಿದೆ.
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಟ್ವಿಟರ್ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ
ಯೂಟ್ಯೂಬ್ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ