ರಾಜ್ಯ

ಸಾರ್ವಜನಿಕರಿಗೆ ಬೀಚ್ ಪ್ರವೇಶವಿಲ್ಲ: ನಿಷೇಧಾಜ್ಞೆ ಜಾರಿ

ರೂಪಾಂತರಿತ ಕೊರೊನಾ ಹರಡುವಿಕೆ ತಡೆಗೆ ಕ್ರಮ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ, ಸರ್ಕಾರದ ನಿರ್ದೇಶನದಂತೆ, ಜಿಲ್ಲಾಡಳಿತವು ಎಲ್ಲಾ ಅವಶ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಪ್ರಸ್ತುತ ಯುನೈಟೆಡ್ ಕಿಂಗ್‍ಡಮ್‍ನಲ್ಲಿ ಹೊಸದಾಗಿ ರೂಪಾಂತರಗೊಂಡಿರುವ SARS-Cov2 ವೈರಾಣು ಪತ್ತೆಯಾಗಿದ್ದು, ತೀವ್ರ ಗತಿಯಲ್ಲಿ ಹರಡಿ ಬೆಳವಣಿಗೆ ಹೊಂದುತ್ತಿದೆ. ಅಲ್ಲದೇ ಯುನೈಟೆಡ್ ಕಿಂಗ್‍ಡಮ್‍ನಿಂದ ರಾಜ್ಯಕ್ಕೆ ಇತ್ತೀಚೆಗೆ ಆಗಮಿಸಿರುವ ಪ್ರಯಾಣಿಕರಲ್ಲಿ ಕೋವಿಡ್-19 ಪಾಸಿಟಿವ್ ಇರುವುದು ಕಂಡು ಬಂದಿದೆ.

ಈ ಹಿನ್ನೆಲೆಯಲ್ಲಿ SARS-Cov2 ವೈರಾಣು ಹರಡುವಿಕೆಯನ್ನು ತಡೆಗಟ್ಟಲು ಹಾಗೂ ಹೊಸವರ್ಷ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ಕಡಲ ತೀರ ಪ್ರದೇಶಗಳಲ್ಲಿ ಅತೀ ಹೆಚ್ಚು ಜನಸಂದಣಿ ಸೇರುವುದರಿಂದ ಸೋಂಕು ಹರಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಲ್ಲೆಯ ಉಳ್ಳಾಲ, ಸೋಮೇಶ್ವರ, ಮೊಗವೀರಪಟ್ಣ, ಪಣಂಬೂರು, ತಣ್ಣೀರುಬಾವಿ, ಸಸಿಹಿತ್ಲು ಮತ್ತು ಸುರತ್ಕಲ್ ಬೀಚ್‍ಗಳಿಗೆ/ ಎಲ್ಲಾ ಕಡಲ ಕಿನಾರೆಗಳಿಗೆ ಡಿಸೆಂಬರ್ 31ರಂದು ಮಧ್ಯಾಹ್ನ 12 ಗಂಟೆಯಿಂದ ಜನವರಿ 2ರಂದು ಮಧ್ಯಾಹ್ನ 12 ಗಂಟೆಯವರೆಗೆ ಸ್ಥಳೀಯ ಹಾಗೂ ಸಾಂಪ್ರದಾಯಿಕ ಮೀನುಗಾರರನ್ನು ಹೊರತು ಪಡಿಸಿ ಇತರೇ ಯಾವುದೇ ಪ್ರವಾಸಿಗರು ಹಾಗೂ ಸಾರ್ವಜನಿಕರು ಪ್ರವೇಶಿಸುವುದನ್ನು ವಿಪತ್ತು ನಿರ್ವಹಣಾ ಕಾಯ್ದೆ-2005 ರ ಕಲಂ (34) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ನಿರ್ಬಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಡಾ. ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

Related posts

ಉಪಚುನಾವಣೆ: ಬಿಜೆಪಿಯ ಮಿಷನ್ 7 ಪ್ಲಸ್; ಮೂವರು ಬಂಡುಕೋರರ ಉಚ್ಚಾಟನೆ

Upayuktha

ಮಹಾರಾಷ್ಟ್ರದಲ್ಲಿ ಕೋವಿಡ್​​ 2ನೇ ಅಲೆ: ಗಡಿಯಲ್ಲಿ ಮತ್ತೆ ಕಟ್ಟೆಚ್ಚರ

Sushmitha Jain

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಜೂನ್ 25ರಿಂದ ಜುಲೈ 4ರ ವರೆಗೆ: ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಪ್ರಕಟಣೆ

Upayuktha