ಉಜಿರೆ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿಗಳಾದ ಪೂಜ್ಯ ಶ್ರೀ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಪುರಾಣ ವಾಚನ- ಪ್ರವಚನ ಕಾರ್ಯಕ್ರಮವನ್ನು ಗುರುವಾರ ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರು ಉದ್ಘಾಟಿಸಿ ಶುಭ ಹಾರೈಸಿದರು.
ಕುಮಾರವ್ಯಾಸ ಮಹಾಕವಿಯ “ಕರ್ನಾಟಕ ಭಾರತ ಕಥಾ ಮಂಜರಿ”ಯ ಆಯ್ದ ಭಾಗವನ್ನು ದಿವಾಕರ ಆಚಾರ್ ವಾಚನ ಮಾಡಿದರು ಹಾಗೂ ಉಜಿರೆ ಅಶೋಕ ಭಟ್ ಪ್ರವಚನ ನೀಡಿದರು.
ಶ್ರೀಮತಿ ಶ್ರದ್ಧಾ ಅಮಿತ್, ದೇವಳದ ಪಾರುಪತ್ಯಗಾರ್ ಲಕ್ಷ್ಮೀನಾರಾಯಣ ರಾವ್, ಎ.ವಿ. ಶೆಟ್ಟಿ, ಭುಜಬಲಿ ಮತ್ತು ಶ್ರೀನಿವಾಸ ರಾವ್ ಉಪಸ್ಥಿತರಿದ್ದರು.
ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಪ್ರತಿದಿನ ಗಂಟೆ 6.30 ರಿಂದ 8ರ ತನಕ ಪುರಾಣ ವಾಚನ-ಪ್ರವಚನ ನಡೆಯುತ್ತದೆ.
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಟ್ವಿಟರ್ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ
ಯೂಟ್ಯೂಬ್ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್ App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.