ದೇಶ-ವಿದೇಶ

ರಾಹುಲ್ ಗಾಂಧಿಗೆ ಕೊರೊನಾ ಸೋಂಕು ದೃಢ; ಬಂಗಾಳದ ರ‍್ಯಾಲಿಗಳನ್ನು ನಿನ್ನೆಯೇ ರದ್ದುಪಡಿಸಿದ್ದ ಕಾಂಗ್ರೆಸ್ ನಾಯಕ

ಹೊಸದಿಲ್ಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ವಿಷಯವನ್ನು ಅವರೇ ಸ್ವತಃ ಟ್ವೀಟ್ ಮಾಡುವ ಮೂಲಕ ಬಹಿರಂಗಪಡಿಸಿದ್ದಾರೆ.

‘ಸೋಂಕಿನ ಲಘು ಲಕ್ಷಣಗಳು ಕಂಡು ಬಂದಿದ್ದು ಪರೀಕ್ಷೆ ನಡೆಸಿದಾಗ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಳೆದ ಕೆಲವು ದಿನಗಳಿಂದ ನನ್ನ ಜತೆ ಸಂಪರ್ಕದಲ್ಲಿದ್ದವರು ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಿ’ ಎಂದು ರಾಹುಲ್ ಗಾಂಧಿ (50) ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ವೈದ್ಯರ ಸಲಹೆಯಂತೆ ಸದ್ಯ ತಮ್ಮ ಮನೆಯಲ್ಲಿ ಪ್ರತ್ಯೇಕವಾಸ (ಕ್ವಾರಂಟೈನ್‌) ದಲ್ಲಿದ್ದಾರೆ. ಕಳೆದ 12 ದಿನಗಳಿಂದ ತಮ್ಮ ತಾಯಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿಲ್ಲ. ಐದು ದಿನಗಳಿಂದ ಸೋದರಿ ಪ್ರಿಯಾಂಕಾ ವಾದ್ರಾ ಅವರನ್ನೂ ಭೇಟಿ ಮಾಡಿಲ್ಲ ಎಂದು ರಾಹುಲ್‌ ಗಾಂಧಿ ಅವರ ಆಪ್ತ ಮೂಲಗಳು ತಿಳಿಸಿವೆ.

ಕೋವಿಡ್ ತೀವ್ರಗತಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ನಿಗದಿಯಾಗಿದ್ದ ತಮ್ಮ ಚುನಾವಣೆ ಸಮಾವೇಶಗಳನ್ನು ರಾಹುಲ್ ಗಾಂಧಿ ರದ್ದುಪಡಿಸಿರುವುದಾಗಿ ಮೊನ್ನೆಯಷ್ಟೇ ಪ್ರಕಟಿಸಿದ್ದರು.

ಈ ವಿಷಯ ತಿಳಿದ ತಕ್ಷಣ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ, ‘ಲೋಕಸಭಾ ಸಂಸದ ರಾಹುಲ್ ಗಾಂಧಿ ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುವುದಾಗಿ’ ತಿಳಿಸಿದ್ದಾರೆ.

ಕಾಂಗ್ರೆಸ್‌ನ ಇನ್ನೊಬ್ಬ ಹಿರಿ ನಾಯಕ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (88) ಅವರೂ ತೀವ್ರ ಜ್ವರದಿಂದ ಬಳಲುತ್ತಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಳಿಕ ಕೋವಿಡ್ ಪರೀಕ್ಷೆ ನಡೆಸಿದಾಗ ಪಾಸಿಟಿವ್‌ ಬಂದಿರುತ್ತದೆ. ಅವರು ಕೋವ್ಯಾಕ್ಸಿನ್‌ನ ಎರಡು ಡೋಸ್‌ ಲಸಿಕೆಗಳನ್ನು ಪಡೆದುಕೊಂಡಿದ್ದರು. ಸದ್ಯ ಮುನ್ನೆಚ್ಚರಿಕೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ಹೇಳಿವೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Related posts

ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯ ದಲ್ಲಿ ಏರುಪೇರು; ಆಸ್ಪತ್ರೆ ದಾಖಲು

Harshitha Harish

ಹೈದರಾಬಾದ್ : ಕಾರು- ಲಾರಿ ಡಿಕ್ಕಿಯಾದ ಪರಿಣಾಮ ಐವರು ಸಾವು

Harshitha Harish

ಖ್ಯಾತ ಪಿಟೀಲು ವಾದಕ ಟಿ.ಎನ್.ಕೃಷ್ಣನ್ ನಿಧನ; ಪಿಎಂ ಸಂತಾಪ

Harshitha Harish