ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ಸ್ವಾತಂತ್ರ್ಯ ಸೇನಾನಿಗಳ ತ್ಯಾಗ ಬಲಿದಾನದ ಸ್ಮರಣೆ ಆದ್ಯ ಕರ್ತವ್ಯ: ರಾಜಶೇಖರ್ ಕಾಕುಂಜೆ

ನಂತೂರು: ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳ ಸ್ವಾತಂತ್ರ್ಯ ದಿನಾಚರಣೆ ಸರಳವಾಗಿ ನಡೆಸಲಾಯಿತು.

ಬಿ.ಎ.ಎಸ್.ಎಫ್. ಪ್ರಧಾನ ವ್ಯವಸ್ಥಾಪಕ ಶ್ರೀ ರಾಜಶೇಖರ್ ಕಾಕುಂಜೆ ಇವರು ಧ್ವಜಾರೋಹಣ ನೆರವೇರಿಸಿ, ಮಾತನಾಡಿ, ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದ ಭಾರತೀಯರನ್ನು ಈ ದಿನ ಸ್ಮರಿಸಬೇಕಾದುದು ನಮ್ಮ ಆದ್ಯ ಕರ್ತವ್ಯ ಎಂದರು. ಈ ಸಂದರ್ಭದಲ್ಲಿ ಕೋವಿಡ್ – 19 ರ ಬಗ್ಗೆ ತೆಗೆದುಕೊಳ್ಳಬೇಕಾದ ಮುಂಜಾಗ್ರತೆಗಳ ಬಗ್ಗೆ ಅರಿವು ಮೂಡಿಸಿದರು.

ಸಮಾರಂಭದಲ್ಲಿ ಲಯನ್ಸ್ ಕ್ಲಬ್ ಕುಡ್ಲ ಇದರ ಅಧ್ಯಕ್ಷ ಶ್ರೀ ಹರೀಶ್ ಕೆ., ಕಾರ್ಯದರ್ಶಿ ಶ್ರೀ ಶ್ರೀಧರ್ ರಾಜ್ ಶೆಟ್ಟಿ ಮತ್ತು ವಲಯ ಅಧ್ಯಕ್ಷ ಶ್ರೀ ಚಂದ್ರಹಾಸ ರೈ ಅವರು ಭಾಗವಹಿಸಿದರು.

ಶ್ರೀ ಭಾರತೀ ಸಮೂಹ ಸಂಸ್ಥೆಗಳ ಕಾರ್ಯಾಲಯ ಕಾರ್ಯದರ್ಶಿ ಶ್ರೀ ಎಂ. ಟಿ.ಭಟ್, ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಹಿರಿಯ ಶಿಕ್ಷಕಿ ಶ್ರೀಮತಿ ಸುಭದ್ರಾ ಭಟ್, ಶ್ರೀ ಭಾರತೀ ಸಮೂಹ ಸಂಸ್ಥೆಗಳ ದೈಹಿಕ ಶಿಕ್ಷಣ ನಿರ್ದೇಶಕ ಪ್ರತಿಮ ಕುಮಾರ್ ಕೆ.ಎಸ್. ಹಾಗೂ ಸಂಸ್ಥೆಗಳ ಶಿಕ್ಷಕ, ಶಿಕ್ಷಕೇತರ ಸಿಬಂದಿ ಉಪಸ್ಥಿತರಿದ್ದರು.

ಶ್ರೀ ಭಾರತೀ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ವಿದ್ಯಾ ಭಟ್ ಸ್ವಾಗತಿಸಿ, ಸ್ವಾಮಿ ಸದಾನಂದ ಸರಸ್ವತಿ ವಿದ್ಯಾಲಯದ ಮುಖ್ಯೋಪಾಧ್ಯಾಯ ಗುರುರಾಜ್ ಭಟ್ ವಂದಿಸಿದರು.

 

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

 

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್  App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

 

Related posts

ಗಾಯಗೊಂಡ ಕೋತಿ ಆಸ್ಪತ್ರೆಗೆ ಬಂದು ಮುಲಾಮು ಹಚ್ಚಿಸಿಕೊಂಡ ವೀಡಿಯೋ ವೈರಲ್

Upayuktha

ಮಂಜೇಶ್ವರ ಉಪಚುನಾವಣೆ ಫಲಿತಾಂಶ: ಯುಡಿಎಫ್‌ ಮುನ್ನಡೆ 7,923 ಮತಗಳಿಗೆ ಇಳಿಕೆ

Upayuktha

ಮೆಡಿಕಲ್ ಕಾಲೇಜುಗಳಲ್ಲೂ ಆಯುಷ್ಮಾನ್ ಸೌಲಭ್ಯ

Upayuktha

Leave a Comment

error: Copying Content is Prohibited !!