ಕ್ಯಾಂಪಸ್ ಸುದ್ದಿ ಗ್ರಾಮಾಂತರ ಸ್ಥಳೀಯ

ಸಂಶೋಧನೆಗಳು ಸಮಾಜಮುಖಿಯಾಗಿರಬೇಕು: ಪ್ರೊ.ಶ್ರೀಪತಿ ಕಲ್ಲೂರಾಯ

ಉತ್ಕೃಷ್ಟ ಸಂಶೋಧನೆಯಿಂದ ಉನ್ನತ ಶಿಕ್ಷಣದಲ್ಲಿ ಕ್ರಾಂತಿ ಸಾಧ್ಯ

ಉಜಿರೆ: ಸಂಶೋಧನೆಗಳು ಸಮಾಜಮುಖಿಯಾಗಿರಬೇಕು ಹಾಗೂ ವೈಜ್ಞಾನಿಕ ವಿಧಾನಗಳ ಮೂಲಕ ಕೈಗೊಳ್ಳುವ ಸಂಶೋಧನೆಗಳಿಂದ ಉನ್ನತ ಶಿಕ್ಷಣದಲ್ಲಿ ಪ್ರಗತಿ ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಆರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ಶ್ರೀಪತಿ ಕಲ್ಲೂರಾಯ ಅಭಿಪ್ರಾಯಪಟ್ಟರು.

ಪ್ರೊ.ಕಲ್ಲೂರಾಯ ಅವರು ಇತ್ತೀಚೆಗೆ ಉಜಿರೆಯ ಶ್ರೀ ಧ.ಮಂ. ಕಾಲೇಜಿನ ಸ್ನಾತಕೋತ್ತರ ಅರ್ಥಶಾಸ್ತ್ರ ವಿಭಾಗವು ಕಾಲೇಜಿನ ಆಂತರಿಕ ಗುಣಮಟ್ಟ ನಿರ್ವಹಣಾ ಕೋಶದ ಸಹಯೋಗದಲ್ಲಿ ಆಯೋಜಿಸಿದ ‘ಉತ್ಕೃಷ್ಟ ಸಂಶೋಧನಾ ಪತ್ರಿಕೆಗಳಲ್ಲಿ ಸಂಶೋಧನಾ ಲೇಖನ ಪ್ರಕಟಣೆ’ ಎಂಬ ವಿಷಯದ ಮೇಲೆ ನಡೆದ ರಾಜ್ಯಮಟ್ಟದ ವೆಬಿನಾರನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಅವರು ಮಾತನಾಡುತ್ತಾ ಗುಣಮಟ್ಟದ ಸಂಶೋಧನಾ ಫಲಿತಗಳನ್ನು ಉತ್ಕೃಷ್ಟ ಪತ್ರಿಕೆಗಳಲ್ಲಿ ಪ್ರಕಟಿಸುವ ಮೂಲಕ ಜ್ಞಾನದ ವಿಸ್ತಾರ ಮಾಡಬೇಕು ಎಂದು ಕರೆ ನೀಡಿದರು.

ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ರಾಷ್ಟ್ರೀಯ ತಾಂತ್ರಿಕ ಸಂಸ್ಥೆ (ಎನ್.ಐ.ಟಿ.ಕೆ) ಸುರತ್ಕಲ್ ಇಲ್ಲಿಯ ಅರ್ಥಶಾಸ್ತ್ರ ಪ್ರಾಧ್ಯಾಪಕ ಡಾ. ರಾಜೇಶ್ ಆಚಾರ್ಯ ಸಂಶೋಧನೆಯ ವಿವಿಧ ಹಂತಗಳ ಬಗ್ಗೆ ಹಾಗೂ ಗುಣಮಟ್ಟದ ಸಂಶೋಧನಾ ಲೇಖನಗಳನ್ನು ಪ್ರಸ್ತುತ ಪಡಿಸುವಲ್ಲಿ ತೆಗೆದುಕೊಳ್ಳಬೇಕಾದ ಎಚ್ಚರಿಕೆಗಳ ಬಗ್ಗೆ ವಿವರಿಸಿದರು.

ರಾಜ್ಯದಾದ್ಯಂತ ಸುಮಾರು 90 ಸಂಶೋಧನಾಸಕ್ತರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ವಿಭಾಗದ ಮುಖ್ಯಸ್ಥ ಡಾ.ಎ. ಜಯಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದು, ಮೊದಲಿಗೆ ಅರ್ಥಶಾಸ್ತ್ರ ಉಪನ್ಯಾಸಕ ಡಾ. ಗಣರಾಜ್ ಸ್ವಾಗತಿಸಿ ಕೊನೆಗೆ ಡಾ. ಯುವರಾಜ್. ಯು ವಂದಿಸಿದರು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್ App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

Related posts

ಪೆಟ್ರೋಲ್ ಡೀಸೇಲ್ ದರ ಏರಿಕೆ ಖಂಡಿಸಿ ಓಲಾ, ಉಬರ್ ಚಾಲಕರ ಪ್ರತಿಭಟನೆ

Sushmitha Jain

ಪುಂಜಾಲಕಟ್ಟೆಯಲ್ಲಿ ಅಂತರ್‌ಕಾಲೇಜು ಪುರುಷರ ಬಾಲ್‌ ಬ್ಯಾಡ್ಮಿಂಟನ್ ಪಂದ್ಯಾಟ

Upayuktha

ಉದ್ಯೋಗ ಮಾಹಿತಿ: ದ.ಕ ಜಿಲ್ಲೆ ಅಂಗನವಾಡಿ ಹುದ್ದೆಗಳಿಗೆ ನೇಮಕಾತಿ ಅರ್ಜಿ ಆಹ್ವಾನ

Upayuktha